HomeKarnatakaBIG NEWS: ಶಿಗ್ಗಾಂವಿಯಲ್ಲಿ ಸಿಎಂ ಬೊಮ್ಮಾಯಿ ರೋಡ್ ಶೋ ಆರಂಭ; ಕಿಚ್ಚ ಸುದೀಪ್, ಜೆ.ಪಿ.ನಡ್ಡಾ ಭಾಗಿ

BIG NEWS: ಶಿಗ್ಗಾಂವಿಯಲ್ಲಿ ಸಿಎಂ ಬೊಮ್ಮಾಯಿ ರೋಡ್ ಶೋ ಆರಂಭ; ಕಿಚ್ಚ ಸುದೀಪ್, ಜೆ.ಪಿ.ನಡ್ಡಾ ಭಾಗಿ

ಶಿಗ್ಗಾಂವಿ: ವಿಧಾನಸಭಾ ಚುನಾವಣೆಗೆ ಕೇವಲ 20 ದಿನಗಳು ಬಾಕಿಯಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಸ್ವಕ್ಷೇತ್ರ ಶಿಗ್ಗಾಂವಿಯಲ್ಲಿ ಭರ್ಜರಿ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ರೋಡ್ ಶೋ ಆರಂಭವಾಗಿದ್ದು, ಮುಖ್ಯಮಂತ್ರಿಗಳಿಗೆ ನಟ ಕಿಚ್ಚ ಸುದೀಪ್, ಬಿಜೆಪಿ ರಾಷ್ಟ್ರಾಧ್ಯಕ್ಷ  ಜೆ.ಪಿ. ನಡ್ದಾ ಸಾಥ್ ನೀಡಿದ್ದಾರೆ.

ಶಿಗ್ಗಾಂವಿಯಲ್ಲಿ ಜನಸಾಗರವೇ ಹರಿದು ಬಂದಿದ್ದು, ಸಿಎಂ ಬೊಮ್ಮಾಯಿ ಪರ ಜಯಘೋಷ ಕೂಗಿ ಹರ್ಷ ವ್ಯಕ್ತಪಡಿಸಿದ್ದಾರೆ. ರೋಡ್ ಶೋ ಮೂಲಕವಾಗಿ ಸಾಗಿ ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೋಡ್ ಶೋ ಆರಂಭಕ್ಕೂ ಮುನ್ನ ಸಿಎಂ ಬೊಮ್ಮಾಯಿ ಶಿಗ್ಗಾಂವಿಯಲ್ಲಿ ರಾಣಿ ಚೆನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದು, ಈ ವೇಳೆ ನಟ ಸುದೀಪ್, ಜೆ.ಪಿ. ನಡ್ಡಾ ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular