HomeKarnatakaBIG NEWS: ಶಿವಮೊಗ್ಗದ ವಿವಿಧೆಡೆ ಅಪಾರ ಪ್ರಮಾಣದ ದಾಖಲೆ ಇಲ್ಲದ ಹಣ ಜಪ್ತಿ

BIG NEWS: ಶಿವಮೊಗ್ಗದ ವಿವಿಧೆಡೆ ಅಪಾರ ಪ್ರಮಾಣದ ದಾಖಲೆ ಇಲ್ಲದ ಹಣ ಜಪ್ತಿ

ಶಿವಮೊಗ್ಗ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಅಕ್ರಮ ನಡೆಯದಂತೆ ಅಧಿಕಾರಿಗಳು ನಿಗಾವಹಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧೆಡೆ ದಾಖಲೆ ಇಲ್ಲದ ಅಪಾರ ಪ್ರಮಾಣದ ಹಣ ಪತ್ತೆಯಾಗಿದೆ.

ಜಿಲ್ಲೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ದಾಖಲೆ ಇಲ್ಲದ ಲಕ್ಷಾಂತರ ರೂಪಾಯಿ ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ವಿನೋಬನಗರ ಠಾಣಾ ವ್ಯಾಪ್ತಿಯಲ್ಲಿ 27.60 ಲಕ್ಷ ಹಣ ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ 1.79 ಲಕ್ಷ ನಗದು ಹಣ ಜಪ್ತಿ ಮಾಡಲಾಗಿದೆ

ಭದ್ರಾವತಿಯಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 1.25 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ. ಭದ್ರಾವತಿಯ ಪೇಪರ್ ಟೌನ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular