
ಶೃಂಗೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಿಎಂ ಕುಮಾರಸ್ವಾಮಿ, ರಾಜ್ಯ ಬಜೆಟ್ ಬಗ್ಗೆ ನಾನು ಚರ್ಚೆ ಮಾಡಲು ಹೋಗಲ್ಲ ಎಂದರು. ಚುನಾವಣಾ ವಿಚಾರಕ್ಕೆ ಸಂಬಂಧಿಸಿದಂತೆ ಬೇರೆ ರಾಜ್ಯಗಳಲ್ಲಿ ನಡೆಯುವ ಚುನಾವಣೆ ಸಿಸ್ಟಮ್ ಬೇರೆ. ಕರ್ನಾಟಕದ ಚುನಾವಣೆ ಸಿಸ್ಟಮ್ ಬೇರೆ. ಬಿಜೆಪಿಯವರು ನೂರು ಸುಳ್ಳು ಹೇಳಿ ಸತ್ಯ ಮಾಡಲು ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಮಾರ್ಚ್ 11ರಂದು ಬೆಂಗಳೂರು-ಮೈಸೂರು ಹೆದ್ದಾರಿ ಉದ್ಘಾಟನೆಗೆ ಪ್ರಧಾನಿ ಮೋದಿ ಬರುತ್ತಿರುವ ಬಗ್ಗೆ ಕಿಡಿ ಕಾರಿದ ಕುಮಾರಸ್ವಾಮಿ, ತಾವು ಅಭಿವೃದ್ಧಿ ಮಾಡಿದ್ದೇವೆ ಎಂದು ಬಿಂಬಿಸಲು ಬರುತ್ತಿದ್ದಾರೆ. ಇನ್ನು ಶಿವಮೊಗ್ಗ ಏರ್ ಪೋರ್ಟ್ ಉದ್ಘಾಟನೆಗೂ ಬರುತ್ತಿದ್ದಾರಂತೆ. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೋದಿ ಕೊಡುಗೆ ಏನು? ಎಂದು ಪ್ರಶ್ನಿಸಿದರು.

