HomeKarnatakaBIG NEWS: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಆಗಮನ; ಭವ್ಯ ಸ್ವಾಗತ

BIG NEWS: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಆಗಮನ; ಭವ್ಯ ಸ್ವಾಗತ

ಶಿವಮೊಗ್ಗ: ಶಿವಮೊಗ್ಗ ನೂತನ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ರಾಜ್ಯದ 9ನೇ ಹಾಗೂ ದೇಶದ 149ನೇ ವಿಮಾನ ನಿಲ್ದಾಣ ಲೋಕಾರ್ಪಣೆಗೆ ಸಜ್ಜಾಗಿದೆ.

ದೆಹಲಿಯಿಂದ ಸೇನಾ ವಿಮಾನದಲ್ಲಿ ಶಿವಮೊಗ್ಗ ಬಳಿಯ ಸೋಗಾನೆಹಳ್ಳಿ ಬಳಿ ಇರುವ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಬಂದಿಳಿದಿದ್ದಾರೆ. ಪ್ರಧಾನಿ ಮೋದಿಯವರಿಗೆ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಾರಾಯಣಗೌಡ ಸೇರಿದಂತೆ ಹಲವು ಮುಖಂಡರು ಸ್ವಾಗತಿಸಿದರು.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ 80ನೇ ಹುಟ್ಟುಹಬ್ಬದ ದಿನದಂದೇ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಯಾಗಲಿದ್ದು, ಪ್ರಧಾನಿ ಮೋದಿ ನೂತನ ಏರ್ ಪೋರ್ಟ್ ಲೋಕಾರ್ಪಣೆ ಮಾಡಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular