HomeKarnatakaBIG NEWS: ಶಿಸ್ತಿನ ಪಕ್ಷ ಎಂದಿದ್ದ ಬಿಜೆಪಿಯಲ್ಲಿ ಅತಿ ಹೆಚ್ಚು ಅಶಿಸ್ತು ಬಹಿರಂಗ; ಸಿಎಂ ಸಿದ್ದರಾಮಯ್ಯ...

BIG NEWS: ಶಿಸ್ತಿನ ಪಕ್ಷ ಎಂದಿದ್ದ ಬಿಜೆಪಿಯಲ್ಲಿ ಅತಿ ಹೆಚ್ಚು ಅಶಿಸ್ತು ಬಹಿರಂಗ; ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಅಧಿವೇಶನ ಆರಂಭವಾದರೂ ವಿಪಕ್ಷ ನಾಯಕನ ಆಯ್ಕೆ ಮಾಡದ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿಯಲ್ಲಿರುವ ಗುಂಪುಗಾರಿಕೆ ಬಹಿರಂಗವಾಗಿದೆ ಎಂದಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯಲ್ಲಿ ಗುಂಪುಗಾರಿಕೆ ಇರೋದು ಸ್ಪಷ್ಟ. ತಮ್ಮ ಪಕ್ಷ ಶಿಸ್ತಿನ ಪಕ್ಷ ಅಂತ ಹೇಳಿಕೊಳ್ಳುತ್ತಾರೆ. ಆದರೆ ಅತೀ ಹೆಚ್ಚು ಅಶಿಸ್ತು ಇರುವ ಪಕ್ಷ ಬಿಜೆಪಿ. ವಿಪಕ್ಷ ನಾಯಕನ ಆಯ್ಕೆ ವಿಚಾರ ಅವರ ಪಕ್ಷಕ್ಕೆ ಬಿಟ್ಟಿದ್ದು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಪಕ್ಷ ನಾಯಕನಿಲ್ಲದೇ ನಡೆಯುತ್ತಿರುವ ಮೊದಲ ಅಧಿವೇಶನ ಇದು. ಬಿಜೆಪಿಯ 66 ಶಾಸಕರಲ್ಲಿ ವಿಪಕ್ಷ ನಾಯಕನಾಗುವ ಅರ್ಹತೆ ಇರುವ ಒಬ್ಬನೇ ಒಬ್ಬ ಶಾಸಕ ಇಲ್ಲದಿರುವುದು ನಾಚಿಕೆಗೇಡು ಎಂದು ರಾಜ್ಯ ಕಾಂಗ್ರೆಸ್ ಲೇವಡಿ ಮಾಡಿದೆ.

For Latest News Updates, Join Our Whatsapp Community🚩
RELATED ARTICLES

Most Popular