HomeKarnatakaBIG NEWS: ಶೋಭಾ ಕರಂದ್ಲಾಜೆ ಆರೋಪಕ್ಕೆ ಡಿ.ಕೆ. ಶಿವಕುಮಾರ್ ತಿರುಗೇಟು

BIG NEWS: ಶೋಭಾ ಕರಂದ್ಲಾಜೆ ಆರೋಪಕ್ಕೆ ಡಿ.ಕೆ. ಶಿವಕುಮಾರ್ ತಿರುಗೇಟು

ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳಿಂದ ಹಣ ಪಡೆದು ಬಿ ಫಾರ್ಮ್ ನೀಡಲಾಗಿದೆ ಎಂದು ಆರೋಪಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚುನಾವಣಾ ಆಯೋಗಕ್ಕೆ ದೂರು ನೀಡಿರುವ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಅಭ್ಯರ್ಥಿಗಳ ಟಿಕೆಟ್ ಅರ್ಜಿಗೆ ಹಣ ಪಡೆದಿದ್ದೇನೆ ಹೊರತು ಕಮಿಷನ್ ಪಡೆದಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ನಾನು 40% ಕಮಿಷನ್ ಹೊಡೆದಿಲ್ಲ, ಬಿಲ್ಡಿಂಗ್ ಫಂಡ್ ಅಂತಾ ಟಿಕೆಟ್ ಅರ್ಜಿಗೆ ಹಣ ಪಡೆದಿದ್ದೇವೆ. ಬಿಜೆಪಿಯವರ 40% ಕಮಿಷನ್ ಬಗ್ಗೆ ಹಲವು ಸಾಕ್ಷಿಗಳಿವೆ. ಮಾಡಾಳ್ ಪ್ರಕರಣವೇ ಇದಕ್ಕೆ ಸಾಕ್ಷಿ ಎಂದು ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿಗಳಿಂದ 2 ಲಕ್ಷ ರೂಪಾಯಿ ಹಣ ಪಡೆದು ಬಿ ಫಾರ್ಮ್ ನೀಡಿದೆ ಎಂದು ಆರೋಪಿಸಿ ಶೋಭಾ ಕರಂದ್ಲಾಜೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular