ಬೆಂಗಳೂರು: ವಿಪಕ್ಷ ನಾಯಕನ ಆಯ್ಕೆ ಇನ್ನೂ ಆಗದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಘಟಕ ಬಿಜೆಪಿ ಕಾಲೆಳೆದಿದೆ. ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ ಎಂದು ಹೇಳಿದೆ.
ಸಂವಿಧಾನ ತಿಳಿದವರು, ಪ್ರಜಾಪ್ರಭುತ್ವ ಅರಿತವರು, ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದ ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ.
ಆರ್.ಎಸ್.ಎಸ್ ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು, ವಾಟ್ಸಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆಯದವರು, ಸುಳ್ಳು ಹೇಳದವರು, ಘನತೆಯ ವ್ಯಕ್ತಿತ್ವವುಳ್ಳವರು, ತೂಕದ ಮಾತಿನ ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
👉ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ
🔹ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ.
🔹ಸಿಡಿಗೆ ತಡೆಯಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
🔹RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
🔹ವಾಟ್ಸಾಪ್… pic.twitter.com/z0bzup2HGU
— Karnataka Congress (@INCKarnataka) July 1, 2023