HomeKarnatakaBIG NEWS: ಸಕ್ಕರೆ ನಾಡಲ್ಲಿ ಪೊಲೀಸ್ ಬಿಗಿ ಭದ್ರತೆ; ಎಲ್ಲೆಲ್ಲೂ ಖಾಕಿ ಸರ್ಪಗಾವಲು

BIG NEWS: ಸಕ್ಕರೆ ನಾಡಲ್ಲಿ ಪೊಲೀಸ್ ಬಿಗಿ ಭದ್ರತೆ; ಎಲ್ಲೆಲ್ಲೂ ಖಾಕಿ ಸರ್ಪಗಾವಲು

ಮಂಡ್ಯ: ಬೆಂಗಳೂರು-ಮೈಸೂರು ದಶಪಥ ರಸ್ತೆ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಮಂಡ್ಯದ ಮದ್ದೂರಿಗೆ ಭೇಟಿ ನೀಡಲಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಖಾಕಿ ಹೈ ಅಲರ್ಟ್ ಘೋಷಿಸಲಾಗಿದೆ.

ದಶಪಥ ರಸ್ತೆ ಲೋಕಾರ್ಪಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆಯಲಿದ್ದು ಈ ನಿಟ್ಟಿನಲ್ಲಿ ಮಂಡ್ಯ ನಗರ, ಮದ್ದೂರು ಪಟ್ಟಣದಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಖಾಕಿ ಸರ್ಪಗಾವಲು ಹಾಕಲಾಗಿದೆ. ಐವರು ಎಸ್ ಪಿ, 24 ಡಿವೈ ಎಸ್ ಪಿ ನೇತೃತ್ವದಲ್ಲಿ 2300 ಪೊಲೀಸ್ ಸಿಬ್ಬಂದಿ, 14 ಡಿಎ ಆರ್ ತುಕಡಿ ನಿಯೋಜನೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular