HomeKarnatakaBIG NEWS: ಸಚಿವ ಅಶ್ವತ್ಥನಾರಾಯಣ ವಿರುದ್ಧ ರಾಜ್ಯಪಾಲರಿಗೆ ದೂರು

BIG NEWS: ಸಚಿವ ಅಶ್ವತ್ಥನಾರಾಯಣ ವಿರುದ್ಧ ರಾಜ್ಯಪಾಲರಿಗೆ ದೂರು

ಬೆಂಗಳೂರು: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವ ಅಶ್ವತ್ಥನಾರಾಯಣ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ದೂರು ನೀಡಿದೆ.

ಕಲಬುರ್ಗಿ ಜಿಲ್ಲೆಯ ಆಳಂದ ಮಾಜಿ ಶಾಸಕ ಬಿ.ಆರ್.‌ ಪಾಟೀಲ್ ಅವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಸಂವಿಧಾನ ಬದ್ಧವಾಗಿ ಕಾರ್ಯನಿರ್ವಹಿಸುವುದಾಗಿ ಪ್ರಮಾಣವಚನ ಸ್ವೀಕರಿಸಿದ ಸಚಿವರು, ಪ್ರಮಾಣವಚನದ ಮೂಲ ತಳಹದಿಯನ್ನೇ ಉಲ್ಲಂಘಿಸಿದ್ದಾರೆ. ಶಾಂತಿ ಸುವ್ಯವಸ್ಥೆ ಕದಡುವ ಮೂಲಕ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡಿದ್ದಾರೆ ಐಪಿಸಿ ಸೆಕ್ಷನ್ 353, 504, 506ರ ಅಡಿ ಅಪರಾಧವೆಸಗಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಕ್ಷಣ ಸಚಿವ ಅಶ್ವತ್ಥನಾರಾಯಣ ಅವರನ್ನು ಸಂಪುಟದಿಂದ ವಜಾಗೊಳಿಸಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ರಾಜ್ಯಪಾಲರಿಗೆ ಪತ್ರದ ಮೂಲಕ ದೂರು ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular