
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಕುಮಾರಸ್ವಾಮಿ, ಬಿಎಂಎಸ್ ಅಕ್ರಮದ ರೂವಾರಿಗಳ ಜತೆ ಅಶ್ವತ್ಥನಾರಾಯಣ ಭೋಜನ ಮಾಡುತ್ತಿರುವ ಫೋಟೊ ಬಿಡುಗಡೆ ಮಾಡಿದ್ದು, ಸುಮಾರು ಹತ್ತು ಸಾವಿರ ಕೋಟಿ ಮೌಲ್ಯದ ಸಾರ್ವಜನಿಕ ಆಸ್ತಿಯನ್ನು ತಮ್ಮದೇ ಸ್ವಂತದ್ದು ಎಂಬ ರೀತಿಯಲ್ಲಿ ಒಂದು ಕುಟುಂಬಕ್ಕೆ ಬರೆದುಕೊಟ್ಟಿದ್ದಾರೆ. ಸಚಿವ ಅಶ್ವತ್ಥ ನಾರಯಾಣ ಅವರ ಅಕ್ರಮದ ಬಗ್ಗೆ ಪ್ರಧಾನಿ ಮೋದಿ, ಅಮಿತ್ ಶಾ ಉತ್ತರ ಕೊಡುತ್ತಾರಾ ಎಂದು ಪ್ರಶ್ನಿಸಿದರು.
ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬರಬೇಕು ಎಂದು ಕಾಯುತ್ತಿದ್ದೇನೆ. ನಮ್ಮ ಸರ್ಕಾರ ಬಂದರೆ ಇವರೆಲ್ಲರ ಅಕ್ರಮಗಳನ್ನು ಬಿಚ್ಚಿಡುತ್ತೇನೆ ಎಂದು ಹೇಳಿದರು.
ನಮ್ಮ ರಾಜ್ಯ ಸರ್ವಜನಾಂಗದ ಶಾಂತಿಯ ತೋಟ ಆಗಬೇಕು. ಈ ಬಾರಿ ಜೆಡಿಎಸ್ 123 ಸ್ಥಾನಗಳಲ್ಲಿ ಗೆಲ್ಲಲಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬರುವುದು ಪಕ್ಕಾ ಎಂದು ಹೇಳಿದರು.

