BIG NEWS: ಸಚಿವ ಸಂಪುಟ ವಿಸ್ತರಣೆ ಕಸರತ್ತು; ಇಂದು ಸಿಎಂ, ಡಿಸಿಎಂ ದೆಹಲಿಗೆ; ಹೊಸಬರಿಗೂ ಸಚಿವ ಸ್ಥಾನ ಸಾಧ್ಯತೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕಸರತ್ತು ಆರಂಭವಾಗಿದ್ದು, ಈ ಬಾರಿ 20 ಜನರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ನಿಟ್ಟಿನಲ್ಲಿ ಚರ್ಚೆ ನಡೆದಿದೆ.

ಅರ್ಹರ ಆಯ್ಕೆ ನಿಟ್ಟಿನಲ್ಲಿ ಚರ್ಚಿಸಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಇಂದು ಒಂದೊಂದು ಪಟ್ಟಿಯೊಂದಿಗೆ ದೆಹಲಿಗೆ ತೆರಳಲಿದ್ದಾರೆ. ಜಾತಿ ಹಾಗೂ ಪ್ರಾದೇಶಿಕ ಲೆಕ್ಕಾಚಾರದ ಜತೆ ಉಬಯ ನಾಯಕರ ಆಪ್ತರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಯತ್ನ ನಡೆದಿದೆ.

ಸಿಎಂ ಸಿದ್ದರಾಮಯ್ಯ ಈಗಾಗಲೆ ತಮ್ಮ ಆಪ್ತರಾದ ಭೈರತಿ ಸುರೇಶ್, ಕೆ.ಜೆ. ಜಾರ್ಜ್ ಜೊತೆ ಸೇರಿ ಮುಂದಿನ ನಡೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ಪ್ರತ್ಯೇಕ ಪಟ್ಟಿಯ ಜೊತೆಗೆ ಹೈಕಮಾಂಡ್ ತನ್ನ ಬಯಕೆಯ ಕೆಲವರ ಹೆಸರನ್ನು ಸೇರಿಸಿ ಅಂತಿಮ ಪಟ್ಟಿ ಸಿದ್ಧಪಡಿಸಿದೆ ಎಂದು ತಿಳಿದುಬಂದಿದೆ. ನಾಳೆ ಸಂಜೆ ವೇಳೆಗೆ ನೂತನ ಸಚಿವರ ಅಂತಿಮ ಪಟ್ಟಿ ಫೈನಲ್ ಆಗಲಿದೆ ಎಂದು ತಿಳಿದುಬಂದಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read