HomeKarnatakaBIG NEWS: ಸದನದಲ್ಲಿ ಸ್ವಾರಸ್ಯಕರ ಚರ್ಚೆ; ಕುಮಾರಸ್ವಾಮಿಯೇ ವಿಪಕ್ಷ ನಾಯಕನಾಗ್ತಾರೆ ಎಂದ ಜಿ.ಟಿ. ದೇವೇಗೌಡ

BIG NEWS: ಸದನದಲ್ಲಿ ಸ್ವಾರಸ್ಯಕರ ಚರ್ಚೆ; ಕುಮಾರಸ್ವಾಮಿಯೇ ವಿಪಕ್ಷ ನಾಯಕನಾಗ್ತಾರೆ ಎಂದ ಜಿ.ಟಿ. ದೇವೇಗೌಡ

ಬೆಂಗಳೂರು: ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ವಿಧಾನಸಭೆಯಲ್ಲಿ ಸ್ವಾರಸ್ಯಕರ ಚರ್ಚೆ ನಡೆದಿದೆ. ಬಿಜೆಪಿ ನಾಯಕರು ಕಿತ್ತಾಡ್ತಾ ಇದ್ದಾರೆ. ವಿಪಕ್ಷ ನಾಯಕನ ಆಯ್ಕೆ ವಿಚಾರ ಹೆಚ್.ಡಿ. ಕುಮಾರಸ್ವಾಮಿಯವರ ಮನೆ ಬಾಗಿಲಿಗೆ ಬರಲಿದೆ ಎಂದು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಹೇಳಿದ್ದಾರೆ.

ವಿಧಾನಸಭೆಯಲ್ಲಿ ವಿಪಕ್ಷ ನಾಯಕನ ಬಗ್ಗೆ ಮಾತನಾಡಿದ ಜಿ.ಟಿ. ದೇವೇಗೌಡ, ರಾಜ್ಯ ಬಿಜೆಪಿ ನಾಯಕರು ಕಚ್ಚಾಡುತ್ತಿದ್ದಾರೆ. ನೋಡ್ತಾ ಇರಿ. ಕುಮಾರಸ್ವಾಮಿಯವರೇ ವಿರೋಧ ಪಕ್ಷದ ನಾಯಕನಾಗ್ತಾರೆ. ಕುಮಾರಸ್ವಾಮಿಯವರೇ, ವಿಪಕ್ಷ ನಾಯಕನ ಸ್ಥಾನ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಮಾಜಿ ಸಿಎಂ ಬಿ ಎಸ್ ವೈ ಅವರನ್ನು ಸಿಎಂ ಸ್ಥಾನದಿಂದ ಯಾಕೆ ಕೆಳಗಿಳಿಸಿದರು ಗೊತ್ತಿಲ್ಲ. ಇಲ್ಲಿ ಬಿಜೆಪಿ ವಿಪಕ್ಷ ನಾಯಕನಿಲ್ಲ. ಲೋಕಸಭೆಯಲ್ಲಿ ಕಾಂಗ್ರೆಸ್ ನ ವಿಪಕ್ಷ ನಾಯಕ ಇಲ್ಲ ಎಂದು ಟಾಂಗ್ ನೀಡಿದರು.

 

For Latest News Updates, Join Our Whatsapp Community🚩
RELATED ARTICLES

Most Popular