BIG NEWS: ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ ಸಚಿವ ಶ್ರೀರಾಮುಲು

ರಾಯಚೂರು:ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಆಕಾಂಕ್ಷೆಗಳು ಗರಿಗೆದರಿವೆ. ಈ ಹಿಂದೆ ಉಪಮುಖ್ಯಮಂತ್ರಿ ಸ್ಥಾನಕ್ಕಾಗಿ ಪ್ರಯತ್ನಿಸಿದ್ದ ಸಚಿವ ಶ್ರೀರಾಮುಲು ಇದೀಗ ಸಿಎಂ ಆಗುವ ಆಶಯ ವ್ಯಕ್ತಪಡಿಸಿದ್ದಾರೆ.

ಚುನಾವಣೆ ಸಮೀಪಿಸುತ್ತಿದ್ದಂತೆ ಶ್ರೀರಾಮುಲು ಅವರಿಗೆ ಡಿಸಿಎಂ ಹುದ್ದೆ ಒಲಿಯುವ ಸಾಧ್ಯತೆ ಇದೆ ಎಂಬ ಸುದ್ದಿ ಹಬ್ಬುತ್ತಿದೆ. ಈ ಸುದ್ದಿ ಬಗ್ಗೆ ತೆರೆ ಎಳೆದಿರುವ ಸಚಿವ ಶ್ರೀರಾಮುಲು ಉಪಮುಖ್ಯಮಂತ್ರಿ ಪಾಳಯ ಹೋಗಿದೆ. ಈಗ ಪ್ರಮೋಷನ್. ಈಗ ಮುಖ್ಯಮಂತ್ರಿ ಪಾಳಯ. ಪಕ್ಷ ಅವಕಾಶ ಮಾಡಿಕೊಟ್ಟರೆ ಸಿಎಂ ಆಗುತ್ತೇನೆ ಎಂದು ಹೇಳಿದ್ದಾರೆ. ಈ ಮೂಲಕ ಮುಖ್ಯಮಂತ್ರಿಯಾಗುವ ಆಶಯ ವ್ಯಕ್ತಪಡಿಸಿದ್ದಾರೆ.

ಇನ್ನು ಸಾರಿಗೆ ನೌಕರರು ಮುಷ್ಕರದ ಎಚ್ಚರಿಕೆ ನೀಡಿರುವ ವಿಚಾರವಾಗಿ ವೇತನ ಹೆಚ್ಚಳ ಬೇಡಿಕೆ ಇಟ್ಟಿದ್ದಾರೆ. ಶೇ.10ರಷ್ಟು ವೇತನ ಹೆಚ್ಚಳದ ಬಗ್ಗೆ ಹೇಳಿದ್ದೇನೆ ಆದರೆ ಅವರು ಅದಕ್ಕೆ ಒಪ್ಪುತ್ತಿಲ್ಲ. ಶೀಘ್ರದಲ್ಲಿಯೇ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ಕೊಡುತ್ತೇನೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read