HomeKarnatakaBIG NEWS: ಸಿಎಂ ಉತ್ತಮ ಬಜೆಟ್ ಮಂಡಿಸಲಿದ್ದಾರೆ; ಸಚಿವ ಚಲುವರಾಯಸ್ವಾಮಿ ವಿಶ್ವಾಸ

BIG NEWS: ಸಿಎಂ ಉತ್ತಮ ಬಜೆಟ್ ಮಂಡಿಸಲಿದ್ದಾರೆ; ಸಚಿವ ಚಲುವರಾಯಸ್ವಾಮಿ ವಿಶ್ವಾಸ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತಮ ಬಜೆಟ್ ಮಂಡನೆ ಮಾಡಲಿದ್ದಾರೆ. ನಾವು ರಾಜ್ಯದ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಿಎಂ ಸಿದ್ದರಾಮಯ್ಯ ಉತ್ತಮ ಬಜೆಟ್ ಮಂಡಿಸುತ್ತಾರೆ. ಗ್ಯಾರಂಟಿ ಗಳನ್ನು ಜನರಿಗೆ ತಲುಪಿಸುತ್ತೇವೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಚಲುವರಾಯಸ್ವಾಮಿ ರಾಜೀನಾಮೆಗೆ ಕುಮಾರಸ್ವಾಮಿ ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ವಿಧಾನಸೌಧದಲ್ಲಿ ಕುಳಿತಿರುವುದಕ್ಕೆ ಅವರಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ಪಾಪ ನನ್ನ ರಾಜೀನಾಮೆ ಕೇಳ್ತಿದ್ದಾರೆ ಕೆಳಲಿ ಬಿಡಿ ಎಂದು ಟಾಂಗ್ ನೀಡಿದರು.

For Latest News Updates, Join Our Whatsapp Community🚩
RELATED ARTICLES

Most Popular