HomeKarnatakaBIG NEWS: ಸಿಎಂ ಬೊಮ್ಮಾಯಿ ಅವರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಭೇಟಿ ದಿಢೀರ್ ರದ್ದು

BIG NEWS: ಸಿಎಂ ಬೊಮ್ಮಾಯಿ ಅವರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಭೇಟಿ ದಿಢೀರ್ ರದ್ದು

ವಿಜಯಪುರ: ನಡೆದಾಡುವ ದೇವರು, ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅಸ್ತಂಗತರಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಟೆಂಪಲ್ ರನ್ ರದ್ದಾಗಿದೆ.

ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಭೇಟಿ ನೀಡಲಿದ್ದರು. ಆದರೆ ಇದೀಗ ಕಾರ್ಯಕ್ರಮ ದಿಢೀರ್ ರದ್ದಾಗಿದೆ. ಸಿದ್ದೇಶ್ವರ ಸ್ವಾಮೀಜಿ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಬೆಳಿಗ್ಗೆ 11 ಗಂಟೆಗೆ ವಿಜಯಪುರದ ಜ್ಞಾನಯೋಗಾಶ್ರಮಕ್ಕೆ ತೆರಳಲಿದ್ದು, ಶ್ರೀಗಳ ಅಂತಿಮ ದರ್ಶನ ಪಡೆಯಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ ಎ ಎಲ್ ನಿಂದ ವಿಶೇಷ ವಿಮಾನದಲ್ಲಿ ವಿಜಯಪುರಕ್ಕೆ ಸಿಎಂ ತೆರಳಲಿದ್ದಾರೆ. ಸಂಜೆ ಸಿದ್ದೇಶ್ವರ ಸ್ವಾಮೀಜಿಗಳ ಅಂತ್ಯಕ್ರಿಯೆಯಲ್ಲಿಯೂ ಸಿಎಂ ಭಾಗಿಯಾಗಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular