HomeKarnatakaBIG NEWS: ಸಿಎಂ ಬೊಮ್ಮಾಯಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ; ತೀವ್ರಗೊಂಡ ಪ್ರತಿಭಟನೆ

BIG NEWS: ಸಿಎಂ ಬೊಮ್ಮಾಯಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ; ತೀವ್ರಗೊಂಡ ಪ್ರತಿಭಟನೆ

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮನೆಯಲ್ಲಿ ಕೋಟಿ ಕೊಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ಕಾಂಗ್ರೆಸ್ ರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, ಪ್ರತಿಭಟನೆ ತೀವ್ರಗೊಳಿಸಿದೆ.

ಕೆಪಿಸಿಸಿ ಕಚೇರಿ ಬಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ಆರಂಭವಾಗಿದ್ದು, ಸಿಎಂ ಬೊಮ್ಮಾಯಿ ರಾಜೀನಾಮೆಗೆ ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.

ಕೈಯಲ್ಲಿ ಬಿತ್ತಿ ಪತ್ರ, ಗೋಡೆಗಳ ಮೇಲೆ ಪೋಸ್ಟರ್ ಗಳನ್ನು ಅಂಟಿಸಲಾಗಿದ್ದು, ಭ್ರಷ್ಟ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ ಕೂಗಿದ್ದಾರೆ. ಶಾಸಕರ ಮಗನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿದೆ. ಹಣದ ಮೂಲಕ ಚುನಾವಣೆ ಗೆಲ್ಲಲು ಬಿಜೆಪಿ ನಾಯಕರು ಹೊರಟಿದ್ದಾರೆ. ಜನರಿಂದಲೇ ಲೂಟಿ ಮಾಡಿ ಅಕ್ರಮವೆಸಗುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ತಕ್ಷಣ ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಬೇಕು. ಈ ನಿಟ್ಟಿನಲ್ಲಿ ಒತ್ತಾಯಿಸಿ ಸಿಎಂ ಮನೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಸಜ್ಜಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular