HomeKarnatakaBIG NEWS: ಸಿಎಂ ಸಿದ್ದರಾಮಯ್ಯಗೆ ಬಿಜೆಪಿಯಿಂದ ಜೀವ ಬೆದರಿಕೆಯಿದೆ; ಎಂ. ಲಕ್ಷ್ಮಣ್ ಆರೋಪ

BIG NEWS: ಸಿಎಂ ಸಿದ್ದರಾಮಯ್ಯಗೆ ಬಿಜೆಪಿಯಿಂದ ಜೀವ ಬೆದರಿಕೆಯಿದೆ; ಎಂ. ಲಕ್ಷ್ಮಣ್ ಆರೋಪ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಈಗಲೂ ಬಿಜೆಪಿಯಿಂದ ಜೀವಬೆದರಿಕೆಯಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಗಂಭೀರ ಆರೋಪ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯನವರಿಗೆ ಜೀವ ಬೆದರಿಕೆಯಿರುವುದರಿಂದಲೇ ಕ್ರಮಕ್ಕೆ ಒತ್ತಾಯ ಮಾಡುತ್ತಿದ್ದೇವೆ. ಅಶ್ವತ್ಥನಾರಾಯಣ ವಿರುದ್ಧ ನೀಡಿದ್ದ ದೂರಿನ ಬಗ್ಗೆ ಕ್ರಮಕ್ಕೆ ಆಗ್ರಹಿಸಿದ್ದೇವೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉರಿಗೌಡ, ನಂಜೇಗೌಡ ಟಿಪ್ಪು ಸುಲ್ತಾನ್ ಹೊಡೆದು ಹಾಕಿದಂತೆ ಸಿದ್ದರಾಮಯ್ಯನವರನ್ನು ಹೊಡೆದು ಹಾಕಬೇಕು ಎಂದು ಅಶ್ವತ್ಥನಾರಾಯಣ ಮಂಡ್ಯ ಜಿಲ್ಲೆಯ ಸಾತನೂರಿನಲ್ಲಿ ಹೇಳಿಕೆ ನೀಡಿದ್ದರು.

ಮಾಜಿ ಸಚಿವರ ಹೇಳಿಕೆ ಈಗ ಮತ್ತೆ ವೈರಲ್ ಆಗುತ್ತಿದ್ದು, ಸಿದ್ದರಾಮಯ್ಯ ಮೇಲೆ ದಾಳಿಯಾಗುವ ಸಾಧ್ಯತೆ ಇದೆ. ಸಿಎಂ ಸಿದ್ದರಾಮಯ್ಯನವರಿಗೆ ಏನೇ ಆದರೂ ಅದಕ್ಕೆ ಅಶ್ವತ್ಥನಾರಾಯಣ ಹೊಣೆ. ಕೂಡಲೇ ಅಶ್ವತ್ಥ ನಾರಾಯಣ ಅವರನ್ನು ಪೊಲೀಸರು ಬಂಧಿಸಬೇಕು ಎಂದು ಎಂ. ಲಕ್ಷ್ಮಣ್ ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular