HomeKarnatakaBIG NEWS: ಸಿಎಂ ಸಿದ್ದರಾಮಯ್ಯ ಶಾಸಕ ಸ್ಥಾನ ಅಸಿಂಧುಗೊಳಿಸಲು ಕೋರಿ ಹೈಕೋರ್ಟ್ ಗೆ ಅರ್ಜಿ

BIG NEWS: ಸಿಎಂ ಸಿದ್ದರಾಮಯ್ಯ ಶಾಸಕ ಸ್ಥಾನ ಅಸಿಂಧುಗೊಳಿಸಲು ಕೋರಿ ಹೈಕೋರ್ಟ್ ಗೆ ಅರ್ಜಿ


ಬೆಂಗಳೂರು: ವಿಧಾನಸಭಾ ಚುನಾವಣೆ ವೇಳೆ ಮತದಾರರಿಗೆ ಆಮಿಷವೊಡ್ಡಿದ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಾಸಕ ಸ್ಥಾನ ಅಸಿಂಧುಗೊಳಿಸುವಂತೆ ಕೋರಿ ವ್ಯಕ್ತಿಯೊಬ್ಬರು ಹೈಕೋರ್ಟ್ ಮೊರೆಹೋಗಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಆಮಿಷವೊಡ್ಡಿ ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ಮತದಾರರನ್ನು ಸೆಳೆಯಲು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸಹಿ ಹಾಕಿರುವ ಗ್ಯಾರಂಟಿ ಕಾರ್ಡ್ ಗಳನ್ನು ವಿತರಿಸಿದ್ದರು.

ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 123(1) ಪ್ರಕಾರ ಮತದಾರರಿಗೆ ಆಮಿಷವೊಡ್ಡುವಂತಿಲ್ಲ. ಆದರೂ ಕಾಂಗ್ರೆಸ್ ನಾಯಕರು ಆಮಿಷವೊಡ್ಡಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರ ಶಾಸಕ ಸ್ಥಾನದ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಕೋರಿ ಕೆ.ಎಂ.ಶಂಕರ ಎಂಬುವವರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜುಲೈ 28ಕ್ಕೆ ಮುಂದೂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular