BIG NEWS : ‘ಸಿಎಂ ಸಿದ್ದರಾಮಯ್ಯ’ ಸಂಧಾನ ಸಭೆ ವಿಫಲ : ರಾಜ್ಯದಲ್ಲಿ 3 ನೇ ದಿನಕ್ಕೆ ಕಾಲಿಟ್ಟ ಲಾರಿ ಮುಷ್ಕರ.!

ಬೆಂಗಳೂರು : ಸೋಮವಾರದಿಂದ ಆರಂಭವಾದ ಲಾರಿ ಮುಷ್ಕರ 3 ನೇ ದಿನಕ್ಕೆ ಕಾಲಿಟ್ಟಿದೆ. ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಮುಷ್ಕರ ನಿರತ ಲಾರಿ ಮಾಲೀಕರ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಅವರ ಅಹವಾಲನ್ನು ಆಲಿಸಿದರು.

ಈ ಬಾರಿ ಬಜೆಟ್ನಲ್ಲಿ ಡಿಸೇಲ್ ಮೇಲಿನ ಸುಂಕ ರೂ.2 ಹೆಚ್ಚಳ ಮಾಡಲಾಗಿದೆ. ಆದರೆ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಡಿಸೇಲ್ ದರ ನಮ್ಮ ರಾಜ್ಯದಲ್ಲಿ ಕಡಿಮೆಯಿದೆ. ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮುಷ್ಕರವನ್ನು ಕೈಬಿಡುವಂತೆ ಮನವಿ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಲಾರಿ ಮಾಲಿಕರ ಸಂಘದ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದೆ. ಸರ್ಕಾರ ಬಡವರ ಪರವಾಗಿದ್ದು ಸರ್ಕಾರದೊಂದಿಗೆ ಲಾರಿ ಮಾಲೀಕರು ಸಹಕರಿಸಬೇಕು.

ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಪ್ರತಿ ವರ್ಷ ಸುಮಾರು 14 ಸಾವಿರ ಕೋಟಿ ರೂ. ವೆಚ್ಚ ಮಾಡುತ್ತಿದೆ. 83 ಸಾವಿರ ಕೋಟಿ ರೂ. ಈ ವರ್ಷ ಬಂಡವಾಳ ವೆಚ್ಚಕ್ಕೆ ಮೀಸಲಿರಿಸಲಾಗಿದೆ.

ಸಂಚಾರಿ ದಟ್ಟಣೆ ಅವಧಿಯಲ್ಲಿ ನಗರದ ಒಳಗೆ ಲಾರಿಗಳು ಪ್ರವೇಶಿಸುವುದರ ಬಗ್ಗೆ ಇರುವ ನಿರ್ಬಂಧ ತೆರವು ಸೇರಿದಂತೆ ಇತರ ಬೇಡಿಕೆಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಈ ಕುರಿತಾಗಿ ಇನ್ನೊಮ್ಮೆ ಲಾರಿ ಮಾಲೀಕರ ಸಂಘದೊಂದಿಗೆ ಸಭೆ ನಡೆಸಲಾಗುವುದು ಎಂದರು. ಸಿಎಂ ಸಿದ್ದರಾಮಯ್ಯ ಅವರು ಲಾರಿ ಮಾಲೀಕರ ಜೊತೆ ನಡೆಸಿದ ಸಂಧಾನ ಸಭೆ ವಿಫಲವಾದ ಹಿನ್ನೆಲೆ ಲಾರಿ ಮಾಲೀಕರು, ಚಾಲಕರು ಮುಷ್ಕರ ಮುಂದುವರೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read