
ವಿಧಾನಸೌಧದಲ್ಲಿ ಸಿಎಸ್ ವಂದಿತಾ ಶರ್ಮಾ ಅವರನ್ನು ಭೇಟಿಯಾದ ರೋಹಿಣಿ ಸಿಂಧೂರಿ, ಮಹತ್ವದ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಡಿಜಿ-ಐಜಿಪಿ ಪ್ರವೀಣ್ ಸೂದ್ ಅವರೊಂದಿಗೂ ರೋಹಿಣಿ ಸಿಂಧೂರಿ ಚರ್ಚೆ ನಡೆಸಿದ್ದಾರೆ.
ರೋಹಿಣಿ ಸಿಂಧೂರಿ ವಿರುದ್ಧ ಡಿ. ರೂಪಾ ಸಾಲು ಸಾಲು ಆರೋಪಗಳನ್ನು ಮಾಡಿ, ಖಾಸಗಿ ಫೋಟೋ ಬಿಡುಗಡೆ ಮಾಡಿದ್ದರು. ಇಬ್ಬರು ಅಧಿಕಾರಿಗಳ ಜಗಳ ಸರ್ಕಾರಕ್ಕೆ ಮುಜುಗರವನ್ನುಂಟು ಮಾಡಿದ್ದು, ಇಬ್ಬರು ಮಹಿಳಾ ಅಧಿಕಾರಿಗಳಿಗೆ ನೋಟೀಸ್ ನೀಡುವಂತೆ ಸಿಎಂ ಬೊಮ್ಮಾಯಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದರು.

