HomeKarnatakaBIG NEWS: ಸಿದ್ದರಾಮಯ್ಯಗೆ ಬಾದಾಮಿಯಿಂದಲೇ ಸ್ಪರ್ಧಿಸುವಂತೆ ಒತ್ತಾಯ; ಹೈಕಮಾಂಡ್ ಗೆ ಮನವಿ ಸಲ್ಲಿಸಲು ದೆಹಲಿಗೆ ಹೊರಟ...

BIG NEWS: ಸಿದ್ದರಾಮಯ್ಯಗೆ ಬಾದಾಮಿಯಿಂದಲೇ ಸ್ಪರ್ಧಿಸುವಂತೆ ಒತ್ತಾಯ; ಹೈಕಮಾಂಡ್ ಗೆ ಮನವಿ ಸಲ್ಲಿಸಲು ದೆಹಲಿಗೆ ಹೊರಟ ಬೆಂಬಲಿಗರು

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿಧಾನಸಭಾ ಚುನಾವಣೆ ಸ್ಪರ್ಧೆಗೆ ಕ್ಷೇತ್ರ ಗೊಂದಲದಲ್ಲಿರುವಾಗಲೇ ಇದೀಗ ಸಿದ್ದರಾಮಯ್ಯ ಬೆಂಬಲಿಗರು ಬಾದಾಮಿಯಿಂದಲೇ ಸ್ಪರ್ಧಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಬಾದಾಮಿಯಿಂದಲೇ ಸ್ಪರ್ಧಿಸಬೇಕು ಎಂದು ಬಾದಾಮಿ ಕ್ಷೇತ್ರದ ಜನತೆ ಸಿದ್ದರಾಮಯ್ಯ ಮನೆ ಮುಂದೆ ಪ್ರತಿಭಟನೆಯನ್ನೂ ಮಾಡಿದರು. ಆದರೂ ಕೇಳದ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವುದಾಗಿ ಹೇಳಿದ್ದರು. ಬಳಿಕ ಹೈಕಮಾಂಡ್ ಸೂಚಿಸಿದ ಕ್ಷೇತ್ರದಲ್ಲಿ ಸ್ಪರ್ಧೆ ಎಂದಿದ್ದರು. ಈ ಹಿನ್ನೆಲೆಯಲ್ಲಿ ಬಾದಾಮಿ ಕ್ಷೇತ್ರದ ಸಿದ್ದರಾಮಯ್ಯ ಬೆಂಬಲಿಗರು ಇದೀಗ ಹೈಕಮಾಂಡ್ ಭೇಟಿಗೆ ದೆಹಲಿಗೆ ಹೊರಟಿದ್ದಾರೆ.

ದೆಹಲಿಯಲ್ಲಿ ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾಗಲಿರುವ ಬೆಂಬಲಿಗರು, ಸಿದ್ದರಾಮಯ್ಯನವರಿಗೆ ಬಾದಾಮಿಯಿಂದಲೇ ಸ್ಪರ್ಧೆ ಮಾಡುವಂತೆ ಸೂಚನೆ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ರಣದೀಪ್ ಸುರ್ಜೇವಾಲಾ ಸೇರಿದಂತೆ ಹಲವರನ್ನು ಭೇಟಿಯಾಗಿ ಮನವಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular