BIG NEWS: ಸಿದ್ದರಾಮಯ್ಯರನ್ನು ಸಿಎಂ ಮಾಡದೇ ಇನ್ಯಾರನ್ನು ಮಾಡ್ತಾರೆ ಎಂದ ಶಾಸಕ; ಸ್ವಾಮೀಜಿಗಳ ಬಗ್ಗೆಯೂ ಗರಂ ಆದ ಕೆ.ಎನ್.ರಾಜಣ್ಣ

ಬೆಂಗಳೂರು: ನಾನು ಸಿದ್ದರಾಮಯ್ಯ ಪರ ವೋಟ್ ಹಾಕಿದ್ದೇನೆ. ನನಗೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಬೇಕು ಎಂದು ಮಧುಗಿರಿ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎನ್. ರಾಜಣ್ಣ, ಸಿದ್ದರಾಮಯ್ಯನವರನ್ನು ಸಿಎಂ ಮಾಡದೇ ಇನ್ಯಾರನ್ನು ಮಾಡ್ತಾರೆ? ಸಾಮಾನ್ಯ ವ್ಯಕ್ತಿಯೂ ಸಿದ್ದರಾಮಯ್ಯ ಸಿಎಂ ಆಗಬೇಕು ಎಂದಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ಸಿಎಂ ಆಗಬೇಕು ಎಂಬುದು ನನ್ನ ಅಭಿಪ್ರಾಯ ಎಂದರು.

ಇದೇ ವೇಳೆ ಡಿ.ಕೆ. ಶಿವಕುಮಾರ್ ಸಿಎಂ ಆಗಬೇಕು ಎಂದು ಒಕ್ಕಲಿಗ ಸಮುದಾಯದ ಸ್ವಾಮೀಜಿಗಳು ಹೇಳಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾನು ಸ್ವಾಮೀಜಿಗಳಿಗೆ ಒಂದು ಮನವಿ ಮಾಡುತ್ತೆನೆ. ರಾಜಕಾರಣದಿಂದ ದೂರವಿರಿ ಎಂದು… ಸ್ವಾಮೀಜಿಗಳನ್ನು ನಾವು ಎರಡನೇ ದೇವರು ಎಂದು ನೋಡುತ್ತೇವೆ. ಅವರು ಸಾಮಾನ್ಯ ಮನುಷ್ಯರಂತೆ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read