BIG NEWS: ಸಿದ್ದರಾಮಯ್ಯ ಕರ್ನಾಟಕದ 7 ಕೋಟಿ ಜನತೆಗೆ ಅವಮಾನ ಮಾಡಿದ್ದಾರೆ; ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಕ್ರೋಶ

ಮಂಗಳೂರು: ಲಿಂಗಾಯಿತ ಸಿಎಂ ರಾಜ್ಯವನ್ನು ಹಾಳು ಮಾಡಿದ್ದಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ನಾಯಕರು ಕಿಡಿ ಕಾರಿದ್ದು, ಸಿದ್ದರಾಮಯ್ಯ ರಾಜ್ಯದ ಜನತೆ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಲಿಂಗಾಯಿತ ಸಮುದಾಯಕ್ಕೆ ಸಿದ್ದರಾಮಯ್ಯ ಅವಮಾನ ಮಾಡಿದ್ದಾರೆ. ಸಿದ್ದರಾಮಯ್ಯ ಹೇಳಿಕೆ ಖಂಡನೀಯ. ಸಿದ್ದರಾಮಯ್ಯ ರಾಜ್ಯದ 7 ಕೋಟಿ ಜನತೆಗೆ ಅಪಮಾನಿಸಿದ್ದಾರೆ. ತಕ್ಷಣ ಅವರು ಕ್ಷಮೆ ಕೋರಬೇಕು ಎಂದರು.

ಲಿಂಗಾಯಿತ ಸಮುದಾಯ ಭ್ರಷ್ಟಾಚಾರಿ ಸಮುದಾಯ ಎಂದು ಹೇಳಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಅವರ ಒಂದು ಮುಖ ಇಂದು ಬಹಿರಂಗವಾಗಿದೆ. ಪ್ರಧಾನಿ ಮೋದಿಯವರನ್ನು ಅವಮಾನ ಮಾಡಿದ್ದಕ್ಕೆ ರಾಹುಲ್ ಗಾಂಧಿಗೆ ಯಾವ ಸ್ಥಿತಿ ಬಂದಿದೆ. ಅದೇ ಸ್ಥಿತಿ ಸಿದ್ದರಾಮಯ್ಯನವರಿಗೂ ಬರಬೇಕು. ಜನರೇ ಸಿದ್ದರಾಮಯ್ಯನವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read