HomeKarnatakaBIG NEWS: ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ ರಣದೀಪ್ ಸುರ್ಜೇವಾಲಾ; ಉಬಯ ನಾಯಕರಿಂದ ಮಹತ್ವದ ಚರ್ಚೆ

BIG NEWS: ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ ರಣದೀಪ್ ಸುರ್ಜೇವಾಲಾ; ಉಬಯ ನಾಯಕರಿಂದ ಮಹತ್ವದ ಚರ್ಚೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಮಹತ್ವದ ಚರ್ಚೆ ನಡೆಸಿದ್ದಾರೆ.

ಮತದಾನೋತ್ತರ ಸಮಿಕ್ಷೆಯಲ್ಲಿ ಕಾಂಗ್ರೆಸ್ ಗೆ ಗೆಲುವು ಎಂಬ ವರದಿಗಳು ಬಂದಿರುವ ಹಿನ್ನೆಲೆಯಲ್ಲಿ ರಣದೀಪ್ ಸುರ್ಜೇವಾಲ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಮುಂದಿನ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಕಾಂಗ್ರೆಸ್ ಗೆ ಮೇಲುಗೈ ಆದರೆ ಸರ್ಕಾರ ರಚನೆ ವಿಚಾರವಾಗಿ ಹಾಗೂ ಒಂದು ವೇಳೆ ಅತಂತ್ರ ಸ್ಥಿತಿ ನಿರ್ಮಾಣವಾದರೆ ಮುಂದೆ ಕೈಗೊಳ್ಳಬೇಕಿರುವ ರಣತಂತ್ರದ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಕಳೆದ ಎರಡು ಗಂಟೆಗಳಿಂದ ಇಬ್ಬರು ನಾಯಕರು ಗಂಭೀರ ಚರ್ಚೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular