HomeKarnatakaBIG NEWS: ಸಿದ್ದರಾಮಯ್ಯ ಪುಕ್ಕಲುತನಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ? ಸಂಸದ ಪ್ರತಾಪ್ ಸಿಂಹ ವಾಗ್ದಾಳಿ

BIG NEWS: ಸಿದ್ದರಾಮಯ್ಯ ಪುಕ್ಕಲುತನಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ? ಸಂಸದ ಪ್ರತಾಪ್ ಸಿಂಹ ವಾಗ್ದಾಳಿ

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಪುಕ್ಕಲುತನ ಶುರುವಾಗಿದೆ. ಸೋಲುವ ಭೀತಿಯಲ್ಲಿ ಭಾವನಾತ್ಮಕವಾಗಿ ಮತಗಳನ್ನು ಸೆಳೆಯಲು ಯತ್ನಿಸುತ್ತಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ಇನ್ನೂ 18 ವರ್ಷ ತುಂಬದ ಮೊಮ್ಮಗನನ್ನು ಕರೆದುಕೊಂಡು ಹೋಗಿ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ಮೊಮ್ಮಗನೊಂದಿಗೆ ಪೂಜೆ ಮಾಡಿ ಭಾವನಾತ್ಮಕವಾಗಿ ಮತ ಕೇಳುತ್ತಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಮೊಮ್ಮಗ, ಸೊಸೆ ಹೀಗೆ ಕುಟುಂಬ ಸಮೇತರಾಗಿ ಪೂಜೆ ಮಾಡಿ ಚುನಾವಣೆ ಪ್ರಚಾರ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರ ಪುಕ್ಕಲುತನಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ? ಎಂದು ಪ್ರಶ್ನಿಸಿದ್ದಾರೆ.

ಮೊಮ್ಮಗ ಉತ್ತರಾಧಿಕಾರಿ ಎಂದು ಸಂದೇಶ ಕೊಡ್ತಿದ್ದೀರಾ ಸಿದ್ದರಾಮಯ್ಯನವರೇ ? ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆಯೇ ಸಿದ್ದರಾಮಯ್ಯನವರಿಗೆ ಇಲ್ಲ ಎಂದು ಕಿಡಿಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular