HomeKarnatakaBIG NEWS: ಸಿದ್ದರಾಮಯ್ಯ ಮನೆ ಮುಂದೆ ಅಭಿಮಾನಿಗಳ ಪ್ರತಿಭಟನೆ; ಕೋಲಾರದಿಂದಲೇ ಸ್ಪರ್ಧಿಸುವಂತೆ ಪಟ್ಟು; ಬಾರುಕೋಲಿನಿಂದ ಹೊಡೆದುಕೊಂಡು...

BIG NEWS: ಸಿದ್ದರಾಮಯ್ಯ ಮನೆ ಮುಂದೆ ಅಭಿಮಾನಿಗಳ ಪ್ರತಿಭಟನೆ; ಕೋಲಾರದಿಂದಲೇ ಸ್ಪರ್ಧಿಸುವಂತೆ ಪಟ್ಟು; ಬಾರುಕೋಲಿನಿಂದ ಹೊಡೆದುಕೊಂಡು ಶಕ್ತಿ ಪ್ರದರ್ಶನ

ಬೆಂಗಳೂರು: ಕೋಲಾರ ಕ್ಷೇತ್ರದಿಂದಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧೆ ಮಾಡಬೇಕು ಇಲ್ಲವಾದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕೋಲಾರ ಭಾಗದ ಸಿದ್ದರಾಮಯ್ಯ ಬೆಂಬಲಿಗರು ಎಚ್ಚರಿಕೆ ನೀಡಿದ್ದಾರೆ.

ಕೋಲಾರದಿಂದ ಬೆಂಗಳೂರಿಗೆ ಆಗಮಿಸಿರುವ ಸಿದ್ದರಾಮಯ್ಯ ಅಭಿಮಾನಿಗಳು, ಬೆಂಬಲಿಗರು ಬೆಂಗಳೂರಿನ ಸಿದ್ದರಾಮಯ್ಯ ನಿವಾಸದ ಎದುರು ಧರಣಿ ನಡೆಸಿದ್ದು, ಸಿದ್ದರಾಮಣ್ಣ ಕೋಲಾರಕ್ಕೆ ಬರಲೇ ಬೇಕು, ನಿಮ್ಮನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನಮ್ಮದು ಎಂದು ಘೋಷಣೆಗಳನ್ನು ಕೂಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಲ್ಲದೇ ಬಾರುಕೋಲು ಹಿಡಿದುಕೊಂಡು ಒಬ್ಬರಿಗೊಬ್ಬರು ಹೊಡೆದುಕೊಂಡು ಶಕ್ತಿ ಪ್ರದರ್ಶಿಸಿರುವ ಸಿದ್ದರಾಮಯ್ಯ ಬೆಂಬಲಿಗರು, ಸಿದ್ದರಾಮಯ್ಯ ಕೋಲಾರಕ್ಕೆ ಬರಲೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೂಚನೆ ಬೆನ್ನಲ್ಲೇ ಕೋಲಾರ ಸ್ಪರ್ಧೆಯಿಂದ ಸಿದ್ದರಾಮಯ್ಯ ಹಿಂದೆ ಸರಿದಿರುವ ಹಿನ್ನೆಲೆಯಲ್ಲಿ ತಬ್ಬಿಬ್ಬಾದ ಬೆಂಬಲಿಗರು ಪ್ರತಿಭಟನೆ ಆರಂಭಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular