HomeKarnatakaBIG NEWS: ಸಿದ್ದರಾಮಯ್ಯ ಸೋಲಿಸಲು ಬಿಜೆಪಿ ರಣತಂತ್ರ; ಸಚಿವ ಸೋಮಣ್ಣ ಪರ ಪ್ರಚಾರ ನಡೆಸಲು ಬಿ.ವೈ.ವಿಜಯೇಂದ್ರ...

BIG NEWS: ಸಿದ್ದರಾಮಯ್ಯ ಸೋಲಿಸಲು ಬಿಜೆಪಿ ರಣತಂತ್ರ; ಸಚಿವ ಸೋಮಣ್ಣ ಪರ ಪ್ರಚಾರ ನಡೆಸಲು ಬಿ.ವೈ.ವಿಜಯೇಂದ್ರ ವರುಣಾ ಅಖಾಡಕ್ಕೆ

ಮೈಸೂರು: ಹೈವೋಲ್ಟೇಜ್ ಅಖಾಡವಾಗಿ ಮಾರ್ಪಟ್ಟಿರುವ ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಎಂಟ್ರಿ ಕೊಟ್ಟಿದ್ದಾರೆ.

ವರುಣಾ ಕ್ಷೇತ್ರದಿಂದ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದು, ಸಿದ್ದರಾಮಯ್ಯ ವಿರುದ್ಧ ವಸತಿ ಸಚಿವ ವಿ.ಸೋಮಣ್ಣ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಸಿದ್ದರಾಮಯ್ಯ ಅವರನ್ನು ಸೋಲಿಸಲು ವರುಣಾದಲ್ಲಿ ಬಿಜೆಪಿ ರಣತಂತ್ರ ರೂಪಿಸಿದೆ.

ಬಿ.ವೈ. ವಿಜಯೇಂದ್ರ ಸಚಿವ ವಿ.ಸೋಮಣ್ಣ ಪರ ಚುನವಣಾ ಪ್ರಚಾರಕ್ಕಾಗಿ ವರುಣಾ ಅಖಾಡಕ್ಕಿಳಿದಿದ್ದು, ನಾಳೆ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ವರುಣಾ ಬಳಿಕ ಕೆ.ಅರ್. ಕ್ಷೇತ್ರ, ಮೈಸೂರು, ಚಾಮರಾಜನಗರಗಳಲ್ಲಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular