BIG NEWS: ಸಿದ್ದರಾಮಯ್ಯ ಹಿಟ್ಲರ್ ರೀತಿ ಆಡಳಿತ ಮಾಡ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಸತತವಾಗಿ ಬಿಜೆಪಿಯನ್ನು ಬೈಯ್ಯುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿದ್ದಾರೆ. ತಮ್ಮ ಬಜೆಟ್ ಭಾಷಣದಲ್ಲಿಯೂ ಬಜೆಟ್ ಮಂಡಿಸಿದ್ದಕ್ಕಿಂತ ಹೆಚ್ಚು ಬಿಜೆಪಿಯನ್ನು ಬೈಯ್ಯುವ ಭಾಷಣ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ಸಿಎಂ ಸಿದ್ದರಾಮಯ್ಯ ಹಿಟ್ಲರ್ ರೀತಿ ಆಡಳಿತ ಮಾಡುತ್ತಿದ್ದಾರೆ. ಹಿಟ್ಲರ್ ರೀತಿ ಆಡಳಿತವನ್ನು ನಡೆಸಲು ತೀರ್ಮಾನಿಸಿದಂತಿದೆ. ಇಡೀ ರಾಜ್ಯವನ್ನೇ ಸಾಲದ ಕೂಪಕ್ಕೆ ತಳ್ಳಿದ್ದಾರೆ ಎಂದು ಕಿಡಿ ಕಾರಿದ್ದಾರೆ.

5 ಕೆಜಿ ಅಕ್ಕಿ ಕೊಟ್ಟಿರುವುದು ಕೇಂದ್ರ ಸರ್ಕಾರ. ಇವರು ತಾವು ಎಂದು ಹೇಳುತ್ತಿದ್ದಾರೆ. ಜನರಿಗೆ ಕೊಟ್ಟ ಮಾತಿನಂತೆ ಇವರಿಗೆ 10 ಕೆಜಿ ಅಕ್ಕಿ ಕೊಡಲು ಆಗುತ್ತಿಲ್ಲ. ಆದರೆ ಬಿಜೆಪಿಯನ್ನು ಸತತವಾಗಿ ಬೈಯ್ಯುತ್ತಿದ್ದಾರೆ. ಈ ಮೂಲಕ ಸಿದ್ದರಾಮಯ್ಯನವರು ತಮ್ಮ ರಾಜಕೀಯ ಚಟ ತೀರಿಸಿಕೊಳ್ತಿದ್ದಾರೆ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read