BIG NEWS: ಸಿಲಿಕಾನ್ ಸಿಟಿಯಲ್ಲಿ ಆರಂಭವಾಯ್ತು ಡೆಂಘಿ ಜ್ವರದ ಭೀತಿ; 11 ದಿನಗಳಲ್ಲಿ 173 ಕೇಸ್ ಗಳು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗುತ್ತಿದ್ದಂತೆ ಸಾಂಕ್ರಾಮಿಕ ರೋಗಗಳ ಭೀತಿ ಶುರುವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಬೆಂಗಳೂರಿನಲ್ಲಿ ಕಳೆದ 11 ದಿನಗಳಲ್ಲಿ 178 ಜನರಲ್ಲಿ ಡೆಂಘೀ ಪ್ರಕರಣಗಳು ಪತ್ತೆಯಾಗಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಈ ವರ್ಷ 3565 ಜನರು ಡೆಂಘಿ ಲಕ್ಷಣ ಜ್ವರದಿಂದ ಬಳಲುತ್ತಿರುವವರು ಪತ್ತೆಯಾಗಿದ್ದು, ಇವರಲ್ಲಿ 1009 ಜನರ ರಕ್ತದ ಮಾದರಿ ಪರೀಕ್ಷೆಗೆ ರವಾನೆ ಮಾಡಲಾಗಿದೆ. 1009 ಜನರಲ್ಲಿ 905 ಜನರಿಗೆ ಡೆಂಘಿ ದೃಢಪಟ್ಟಿದೆ.

ಬೆಂಗಳೂರಿನಲ್ಲಿ ಈವರೆಗೆ 919 ಡೆಂಘಿ ಪ್ರಕರಣ ಪತೆಯಾಗಿದೆ. ಪ್ರಸ್ತುತ ಡೆಂಘಿಯಿಂದ ಯಾವುದೇ ಮರಣ ವರದಿ ದಾಖಲಾಗಿಲ್ಲ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read