HomeKarnatakaBIG NEWS: ಸಿ.ಟಿ. ರವಿ ಕೃತ್ಯದಿಂದಾಗಿ ತಾವು ಮಾಡಿದ್ದ ವಾಂತಿ ತಾವೇ ತಿನ್ನುವಂತಾಗಿದೆ; ಪರರ ದೂಷಣೆಯಲ್ಲಿ...

BIG NEWS: ಸಿ.ಟಿ. ರವಿ ಕೃತ್ಯದಿಂದಾಗಿ ತಾವು ಮಾಡಿದ್ದ ವಾಂತಿ ತಾವೇ ತಿನ್ನುವಂತಾಗಿದೆ; ಪರರ ದೂಷಣೆಯಲ್ಲಿ ನಿರತರಾಗಿರುವ ರವಿಗೆ ದೇವರು ಒಳ್ಳೆ ಬುದ್ಧಿಕೊಡಲಿ; ಚಾಟಿ ಬೀಸಿದ ಸಿದ್ದರಾಮಯ್ಯ

ಬೆಂಗಳೂರು: ಮಾಂಸ ತಿನ್ನುವುದು ತಿನ್ನದಿರುವುದು, ದೇವಸ್ಥಾನಗಳಿಗೆ ಹೋಗುವುದು ಹೋಗದಿರುವುದು ವೈಯಕ್ತಿಕ ಆಯ್ಕೆಗಳು. ಇದು ರಾಜಕೀಯ ಚರ್ಚೆಯ ವಸ್ತು ಆಗಬಾರದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜಕೀಯ ನಾಯಕರು ಜನತೆಯ ಕಲ್ಯಾಣ, ರಾಜ್ಯದ ಅಭಿವೃದ್ದಿ ಬಗ್ಗೆ ಚರ್ಚಿಸಬೇಕು. ಪರದೂಷಣೆಯಲ್ಲಿ ನಿರತರಾಗಿರುವ ಬಿಜೆಪಿಯ ಸಿ.ಟಿ. ರವಿ ಅವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ ಎಂದು ಹೇಳಿದ್ದಾರೆ.

ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿರುವ ವಿಡಿಯೋ ಜಗತ್ತಿಗೆಲ್ಲ ಸತ್ಯ ಸಾರುತ್ತಿರುವಾಗ “ತಾನು ತಿಂದದ್ದು ನಿಜ, ದೇವಸ್ಥಾನದ ಒಳಪ್ರವೇಶಿಸಿಲ್ಲ, ರಸ್ತೆಯಲ್ಲಿಯೇ ನಿಂತು ಕೈಮುಗಿದಿದ್ದೆ’’ ಎಂಬ ಸಿ.ಟಿ.ರವಿ ಅವರ ವಾದ, ಸದಾ ಹಸಿಹಸಿ ಸುಳ್ಳು ಹೇಳುವ ಅವರ ಹುಟ್ಟು ಗುಣಕ್ಕೆ ತಕ್ಕ ಹಾಗೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಸುಳ್ಳು ಸುದ್ದಿಯನ್ನೇ ಪ್ರಚಾರ ಮಾಡಿ ನನ್ನನ್ನು ಹಿಂದೂ ವಿರೋಧಿ ಎಂದು ಬಿಜೆಪಿ ನಾಯಕರು ಪ್ರಚಾರ ಮಾಡಿದ್ದರು. ಆ ರೀತಿ ಅಪಪ್ರಚಾರ ಮಾಡಿದವರೆಲ್ಲರೂ ಈಗ ಸಿ.ಟಿ. ರವಿ ಅವರ ಕೃತ್ಯದಿಂದಾಗಿ ತಾವು ಮಾಡಿದ್ದ ವಾಂತಿಯನ್ನು ತಾವೇ ತಿನ್ನುವಂತಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಬಿಜೆಪಿ ನಾಯಕರ ಸುಳ್ಳು ಸುದ್ದಿಯನ್ನು ನಂಬಿ ನನ್ನನ್ನು ಟೀಕಿಸಿದ್ದ ರಾಜ್ಯದ ಕೆಲವು ಮಠಾಧೀಶರು, ಸಿ.ಟಿ. ರವಿ ಅವರು ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿರುವ ಬಗ್ಗೆ ಮೌನವಾಗಿರುವುದು ನನಗೆ ಅಚ್ಚರಿ ಉಂಟುಮಾಡಿದೆ ಎಂದು ಮಠಾಧೀಶರ ವಿರುದ್ಧವೂ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular