BIG NEWS: ಸಿ.ಟಿ. ರವಿ ಮುಂದಿನ ಮುಖ್ಯಮಂತ್ರಿ; ಅಭಿಮಾನಿಗಳ ಘೋಷಣೆ

ಚಿಕ್ಕಮಗಳೂರು: ವಿಧಾನಸಭೆ ಚುನಾವಣೆ ಘೋಷಣೆಗೆ ಕೆಲ ದಿನಗಳು ಮಾತ್ರ ಬಾಕಿ ಇದ್ದು, ರಾಜಕೀಯ ಪಕ್ಷಗಳಲ್ಲಿ ಮತ್ತೆ ಮುಖ್ಯಮಂತ್ರಿ ಅಭ್ಯರ್ಥಿ ಚರ್ಚೆ ಶುರುವಾಗಿದೆ.

ಇತ್ತೀಚೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಕರ್ನಾಟಕದಲ್ಲಿ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಈಗ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅಭಿಮಾನಿಗಳು, ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಸಿ.ಟಿ.  ರವಿ ಎಂದು ಘೋಷಣೆ ಕೂಗಿದ್ದಾರೆ.

ಸಿ.ಟಿ. ರವಿ ರಾಜ್ಯದ ಮುಂದಿನ ಸಿಎಂ ಆಗಲಿ ಎಂದು ಅಭಿಮಾನಿಗಳು ಚಿಕ್ಕಮಗಳೂರು ನಗರದಿಂದ ಕುಮಾರಗಿರಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಪಾದಯಾತ್ರೆ ಮಾಡಿದ್ದಾರೆ. ಇತಿಹಾಸ ಪ್ರಸಿದ್ದ ಸುಬ್ರಹ್ಮಣ್ಯಸ್ವಾಮಿ ದೇವರಿಗೆ ಬೆಳ್ಳಿಯ ಬಾಣ ಅರ್ಪಿಸಿದ್ದಾರೆ.

300ಕ್ಕೂ ಹೆಚ್ಚು ಅಭಿಮಾನಿಗಳು ಪಾದಯಾತ್ರೆ ಕೈಗೊಂಡು, ಸಿ.ಟಿ. ರವಿ ರಾಜ್ಯದ ಮುಂದಿನ ಸಿಎಂ ಆಗಲಿ ಎಂದು ಸುಬ್ರಹ್ಮಣ್ಯ ದೇವರಲ್ಲಿ ಪ್ರಾರ್ಥಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read