BIG NEWS : ಸೇವಾನಿರತ ‘OBC’ ಅಭ್ಯರ್ಥಿಗಳಿಗೆ ಕೆನೆಪದರ ಮಿತಿಗೆ ವಿನಾಯಿತಿ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

ಬೆಂಗಳೂರು : ಸೇವೆಯಲ್ಲಿರುವ ಹಿಂದುಳಿದ ವರ್ಗಗಳ ಪ್ರವರ್ಗ-2(ಎ), ಪ್ರವರ್ಗ-2(ಬಿ), ಪ್ರವರ್ಗ-3(ಎ) ಹಾಗೂ ಪ್ರವರ್ಗ-3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ ಕೆನಪದರ ಮಿತಿಗೆ ವಿನಾಯಿತಿ ಹಾಗೂ ಜಾತಿ ಪ್ರಮಾಣ ಪತ್ರ ನೀಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಸರ್ಕಾರದ ಸುತ್ತೋಲೆ ಸಂಖ್ಯೆ ಸಕಇ 60 ಬಿಸಿಎ 2004, ದಿನಾಂಕ:28-03-2005ರಲ್ಲಿ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ ನೇಮಕಾತಿಗಳು ಮತ್ತು ಮುಂತಾದವುಗಳ ಮೀಸಲಾತಿ) (ತಿದ್ದುಪಡಿ) ನಿಯಮಗಳು, 2000ರ ನಿಯಮ-3(ಎ) (2) ಪ್ರಕಾರ ತಹಶೀಲ್ದಾರರು ಅರ್ಜಿ ಸ್ವೀಕರಿಸಿದ ದಿನಾಂಕದಿಂದ 2 ತಿಂಗಳೊಳಗಾಗಿ, ನಮೂನ-ಡಿ, ಇ. ಎಫ್ ಗಳಲ್ಲಿ ವ್ಯಾಸಂಗ, ಉದ್ಯೋಗ ಮತ್ತಿತರ ಎಲ್ಲಾ ಉದ್ದೇಶಗಳಿಗಾಗಿ ಜಾತಿ ಅಥವಾ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ನೀಡತಕ್ಕದ್ದೆಂದು ಶ್ರುತಪಡಿಸಲಾಗಿದೆ ಎಂದು ನಮೂದಾಗಿರುತ್ತದೆ.

ಈ ಹಿನ್ನೆಲೆಯಲ್ಲಿ ನೇರ ನೇಮಕಾತಿಗಾಗಿ ಸಂವಿಧಾನದ ಪರಿಚ್ಛೇದ 15(4) ಹಾಗೂ 16(4)ರಡಿಯಲ್ಲಿ ಪ್ರವರ್ಗ-1 ಎ. 11-ಬಿ, 1||-ಎ, 3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಕೆಳಗಿನ ಹಂತದ ಹುದ್ದೆಗಳಲ್ಲಿ ನಿರ್ಧಿಷ್ಟ ಅವಧಿಯ ಅನುಭವವನ್ನು ನಿಯಮಿಸಿದಲ್ಲಿ ಅಂತಹ ಸಂದರ್ಭದಲ್ಲಿ ಕೆನೆಪದರ ನಿಯಮವು ಅನ್ವಯವಾಗುವುದಿಲ್ಲ.
ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರೆ ಹಿಂದುಳಿದ ವರ್ಗಗಳ (ನೇಮಕಾತಿಗಳು ಮತ್ತು ಮುಂತಾದವುಗಳ ಮೀಸಲಾತಿ) ಅಧಿನಿಯಮ, 1990 ಮತ್ತು ನಿಯಮಗಳು, 1992 ಹಾಗೂ ತಿನ್ನುವಡಿ ನಿಯಮಗಳು, 2000ರ ಅನುಸಾರ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ ಅಥವಾ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಪಡೆಯಲು ಅರ್ಹರಿರುತ್ತಾರೆ.

ಆದ್ದರಿಂದ, ಸೇವೆಯಲ್ಲಿರುವ ಹಿಂದುಳಿದ ವರ್ಗಗಳ ಪ್ರವರ್ಗ-2(ಎ), ಪ್ರವರ್ಗ-2(ಬಿ) ಪ್ರವರ್ಗ-3(ಎ) ಹಾಗೂ ಪ್ರವರ್ಗ-3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ ಕೆನಪದರ ಮಿತಿಗೆ ವಿನಾಯಿತಿ ನೀಡುವುದಕ್ಕಾಗಿ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲಿಸಿ, ಇದರೊಂದಿಗೆ ಲಗತ್ತಿಸಿರುವ ನಮೂನೆ-೫ರಲ್ಲಿ ಸಂಬಂಧಪಟ್ಟ ತಹಶೀಲ್ದಾರುಗಳು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಜಾತಿ ದೃಢೀಕರಣ ಪತ್ರ ನೀಡಲು ಕ್ರಮವಹಿಸುವುದು ಎಂದು ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read