HomeKarnatakaBIG NEWS: ಸ್ನೇಹಿತರೊಂದಿಗೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವು

BIG NEWS: ಸ್ನೇಹಿತರೊಂದಿಗೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವು

ಶಿವಮೊಗ್ಗ: ಸ್ನೇಹಿತರೊಂದಿಗೆ ಪಾರ್ಟಿಗೆಂದು ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಚಿಕ್ಕಮಗಳೂರು ಮೂಲದ 22 ವರ್ಷದ ಸುರೇಶ್ ಮೃತ ಯುವಕ. ಶಿವಮೊಗ್ಗದಲ್ಲಿ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದ ಸುರೇಶ್, ಸ್ನೇಹಿತರೊಂದಿಗೆ ಪಾರ್ಟಿಗೆ ಹೋಗಿದ್ದ. ರೈಲ್ವೆ ಫ್ಲೈಓವರ್ ಬಳಿಯ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಕುಳಿತಿದ್ದ ಸುರೇಶ್ ಗೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ನಲ್ಲಿ ಬಂದ ವ್ಯಕ್ತಿ ಬೈಕ್ ಡಿಕ್ಕಿ ಹೊಡೆಸಿ ಪರಾರಿಯಾಗಿದ್ದಾನೆ.

ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಶಿವಮೊಗ್ಗ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular