
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿರುವ ಸ್ಯಾಂಟ್ರೋ ರವಿ ಬಂಧನಕ್ಕಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಸ್ಯಾಂಟ್ರೋ ರವಿ ಬಂಧನಕ್ಕಾಗಿ ವಿಶೇಷ ತಂಡ ರಚಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಸ್ಯಾಂಟ್ರೋ ರವಿಯ ಚಲನವಲನಗಳ ಮೇಲೆ ನಿಗಾ ಇಡಲಾಗಿದೆ. ಈಗಾಗಲೇ ಆತನ ಹಿಂಬಾಲಕರನ್ನು ಪೊಲೀಸರು ಬಂಧಿಸಿ ವಿಚಾರಣೆ ನದೆಸಿದ್ದಾರೆ ಎಂದರು.
ಸ್ಯಾಂಟ್ರೋ ರವಿ ಬಂಧನಕ್ಕೆ ವಿಶೇಷ ತಂಡ ರಚನೆ ಮಾಡಲಾಗಿದೆ. ಶೀಘ್ರದಲ್ಲಿಯೇ ಆರೋಪಿ ಸ್ಯಾಂಟ್ರೋ ರವಿಯನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

 
		 
		 
		 
		 Loading ...
 Loading ... 
		 
		 
		