BIG NEWS: ಹನುಮನ ಭಕ್ತರು ಸಿಡಿದೆದ್ದರೆ ಕಾಂಗ್ರೆಸ್ ಪಕ್ಷವನ್ನು ದೇಶದಿಂದಲೇ ಬೇರು ಸಮೇತ ಕಿತ್ತೊಗೀತಾರೆ; ಸಿಎಂ ಬೊಮ್ಮಾಯಿ ಆಕ್ರೋಶ

ಗದಗ: ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಹೀಗಾಗಿ ಬಜರಂಗದಳ ನಿಷೇಧ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಶಿರಹಟ್ಟಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ನಿಷೇಧ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ, ಕೇಂದ್ರ ಸರ್ಕಾರಕ್ಕೆ ಮಾತ್ರ ಇದೆ. ಸಾಮಾಜಿಕವಾಗಿ, ಧಾರ್ಮಿಕವಾಗಿ ಕೆಲಸ ಮಾಡುವ ಸಂಘ ಬಜರಂಗದಳ. ಪಿ ಎಫ್ ಐ ದೇಶ ವಿರೋಧಿ ಕೆಲಸ ಮಾಡಿದೆ. ಭಯೋತ್ಪಾದನೆ ಮಾಡಿದೆ. ಅದಕ್ಕೆ ಸಾಕಷ್ಟು ಪುರಾವೆಗಳೂ ಇವೆ. ಕಾಂಗ್ರೆಸ್ ನವರು ಪಿ ಎಫ್ ಐ ಸಂಘಟನೆಗೆ ಬಜರಂಗದಳವನ್ನು ಹೋಲಿಕೆ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.

ನಮ್ಮ ಪ್ರಧಾನಿ ಮೋದಿ ಈಗಾಗಲೇ ಪಿಎಫ್ಐ ಬ್ಯಾನ್ ಮಾಡಿದ್ದಾರೆ. ನಮ್ಮ ಪರಂಪರೆ, ನಮ್ಮ ಧರ್ಮ, ನಮ್ಮ ಇತಿಹಾಸವನ್ನು ಗಟ್ಟಿಕೊಳಿಸಿರುವುದು ಭಜರಂಗದಳ. ಹನುಮನ ಭಕ್ತರು ಒಬ್ಬೊಬ್ಬರು ಸಿಡಿದೆದ್ದು ನಿಂತರೆ ಕಾಂಗ್ರೆಸ್ ಪಕ್ಷ ದೇಶದಿಂದಲೇ ಬೇರು ಸಮೇತ ಕಿತ್ತೊಗೀತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read