HomeKarnatakaBIG NEWS: ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸಚಿವ ಸಂತೋಷ್ ಲಾಡ್ ದಿಢೀರ್ ಭೇಟಿ

BIG NEWS: ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸಚಿವ ಸಂತೋಷ್ ಲಾಡ್ ದಿಢೀರ್ ಭೇಟಿ

ಹುಬ್ಬಳ್ಳಿ: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಅವ್ಯವಸ್ಥೆ, ರೋಗಿಗಳ ಪರದಾಟದ ವಿಚಾರವಾಗಿ ಆಗಾಗ ಸುದ್ದಿಯಾಗುತ್ತಲೇ ಇರುತ್ತದೆ. ಇದರ ಬೆನ್ನಲ್ಲೇ ಇಂದು ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವರೂ ಆಗಿರುವ ಸಂತೋಷ್ ಲಾಡ್, ಕಿಮ್ಸ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಿಮ್ಸ್ ಆಸ್ಪತ್ರೆಯಲ್ಲಿ ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಿದರು. ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೇ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳ ಆರೋಗ್ಯ ವಿಚಾರಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಸ್ಪತ್ರೆಯಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ದೊರೆಯಬೇಕು. ಔಷಧಗಳ ಸಮಸ್ಯೆ ಆಗಬಾರದು. ರೋಗಿಗಳ ಬಗ್ಗೆ ನಿರ್ಲಕ್ಷ ತೋರಿದರೆ ಅಂತಹ ವೈದ್ಯರು ಹಾಗೂ ಸಿಬ್ಬಂದಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವರು ಎಚ್ಚರಿಕೆ ನೀಡಿದರು.

For Latest News Updates, Join Our Whatsapp Community🚩
RELATED ARTICLES

Most Popular