HomeKarnatakaBIG NEWS: ಹುಬ್ಬಳ್ಳಿ-ಧಾರವಾಡ ಪಾಲಿಕೆ ಗದ್ದುಗೆ ಹಿಡಿಯಲು ಕೈ ನಾಯಕರಿಗೆ ಹೈಕಮಾಂಡ್ ಟಾಸ್ಕ್; ಸಚಿವ ಸಂತೋಷ್...

BIG NEWS: ಹುಬ್ಬಳ್ಳಿ-ಧಾರವಾಡ ಪಾಲಿಕೆ ಗದ್ದುಗೆ ಹಿಡಿಯಲು ಕೈ ನಾಯಕರಿಗೆ ಹೈಕಮಾಂಡ್ ಟಾಸ್ಕ್; ಸಚಿವ ಸಂತೋಷ್ ಲಾಡ್ ನೇತೃತದಲ್ಲಿ ಸರಣಿ ಸಭೆ

ಹುಬ್ಬಳ್ಳಿ: ಜೂನ್ 20ರಂದು ಹುಬ್ಬಳ್ಳಿ-ಧಾರವಾಡ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಅಧಿಕಾರ ಹಿಡಿಯಲು ಕಾಂಗ್ರೆಸ್ ರಣತಂತ್ರ ರೂಪಿಸಿದೆ. ಈಗಾಗಲೇ ಮಹಾನಗರ ಪಾಲಿಕೆ ಗದ್ದುಗೆ ಹಿಡಿಯಲು ತಂತ್ರ ಹೆಣೆದಿರುವ ಬಿಜೆಪಿ ರೆಸಾರ್ಟ್ ರಾಜಕಾರಣ ಆರಂಭಿಸಿರುವ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಕೈ ನಾಯಕರಿಗೆ ಟಾಸ್ಕ್ ನೀಡಿದೆ.

ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸಂತೋಷ್ ಲಾಡ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ನಾಯಕರು ಸರಣಿ ಸಭೆ ನಡೆಸಿದ್ದಾರೆ. ಈಬಾರಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕೈ ವಶವಾಗಲೇಬೇಕು ಎಂಬ ನಿಟ್ಟಿನಲ್ಲಿ ರಣತಂತ್ರ ರೂಪಿಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂತೋಷ್ ಲಾಡ್ ನೇತೃತ್ವದಲ್ಲಿ ನಡೆದಿರುವ ಸಭೆಯಲ್ಲಿ ಮಾಜಿ ಸಿಎಮ್ ಜಗದೀಶ್ ಶೆಟ್ಟರ್, ವಿನಯ್ ಕುಲಕರಣಿ, ಪ್ರಸಾದ್ ಅಬ್ಬಯ್ಯ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular