
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಹೈಕಮಾಂಡ್ ಸೂಚನೆ ಮೇರೆಗೆ ಕೊನೇ ಕ್ಷಣದಲ್ಲಿ ಪದ್ಮನಾಭನಗರದ ಅಭ್ಯರ್ಥಿ ಬದಲಾವಣೆ ಆಗಿದ್ದು, ಡಿ.ಕೆ.ಸುರೇಶ್ ಕಣಕ್ಕಿಳಿಯಲಿದ್ದಾರೆ ಎಂದರು.
ಈ ಹಿನ್ನೆಲೆಯಲ್ಲಿ ಇಂದು ಡಿ.ಕೆ.ಸುರೇಶ್ ಪದ್ಮನಾಭನಗರದಿಂದ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.
ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಸಚಿವ ಆರ್.ಅಶೋಕ್ ಅವರನ್ನು ಕಣಕ್ಕಿಳಿಸಿರುವ ಹಿನ್ನೆಲೆಯಲ್ಲಿ ಆರ್.ಅಶೋಕ್ ಅವರ ಸ್ವ ಕ್ಷೇತ್ರದಲ್ಲೇ ಅವರನ್ನು ಕಟ್ಟಿಹಾಕುವ ನಿಟ್ಟಿನಲ್ಲಿ ಕಾಂಗ್ರೆಸ್ ರಣತಂತ್ರ ರೂಪಿಸಿದ್ದು, ಡಿ.ಕೆ.ಸುರೇಶ್ ಅವರನ್ನು ಅಖಾಡಕ್ಕಿಳಿಸಿದೆ.

