BIG NEWS: 2 ಕ್ಷೇತ್ರಗಳಿಂದ ಸ್ಪರ್ಧೆ ವಿಚಾರ; ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

ತುಮಕೂರು: ಮಾಜಿ ಡಿಸಿಎಂ ಡಾ.‌ ಜಿ. ಪರಮೇಶ್ವರ್ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದ್ದು ಈ ಬಗ್ಗೆ ಸ್ವತಃ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಈ ಬಾರಿ ಚುನಾವಣೆಯಲ್ಲಿಯೂ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಲು ಬಯಸಿದ್ದು, ಇದರ ಬೆನ್ನಲ್ಲೇ ಡಾ. ಜಿ.ಪರಮೇಶ್ವರ್ ಕೂಡ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದಾರೆ ಎನ್ನಲಾಗಿತ್ತು.

ಇದೀಗ ಊಹಾಪೋಹಗಳಿಗೆ ತೆರೆ ಎಳೆದಿರುವ ಪರಮೇಶ್ವರ್, ನಾನು ಎರಡು ಕ್ಷೇತ್ರಗಳಿಂದ ಸ್ಪರ್ಧಿಸುತ್ತಿಲ್ಲ ಎಂದಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಅವರು, ನಾನು ಎರಡು ಕ್ಷೇತ್ರಗಳ ಟಿಕೆಟ್ ಕೇಳಿಲ್ಲ. ಕೊರಟಗೆರೆ ಕ್ಷೇತ್ರದಲ್ಲಿ ಮಾತ್ರ ನಾನು ಸ್ಪರ್ಧೆ ಮಾಡುತ್ತೇನೆ. ಎರಡು ಕ್ಷೇತ್ರದ ವಿಚಾರ ಯಾಕೆ ಬಂತು ಎಂಬುದೂ ನನಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read