
ಮಾಜಿ ಸಿಎಂ ಸಿದ್ದರಾಮಯ್ಯ ಈ ಬಾರಿ ಚುನಾವಣೆಯಲ್ಲಿಯೂ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಲು ಬಯಸಿದ್ದು, ಇದರ ಬೆನ್ನಲ್ಲೇ ಡಾ. ಜಿ.ಪರಮೇಶ್ವರ್ ಕೂಡ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದಾರೆ ಎನ್ನಲಾಗಿತ್ತು.
ಇದೀಗ ಊಹಾಪೋಹಗಳಿಗೆ ತೆರೆ ಎಳೆದಿರುವ ಪರಮೇಶ್ವರ್, ನಾನು ಎರಡು ಕ್ಷೇತ್ರಗಳಿಂದ ಸ್ಪರ್ಧಿಸುತ್ತಿಲ್ಲ ಎಂದಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು, ನಾನು ಎರಡು ಕ್ಷೇತ್ರಗಳ ಟಿಕೆಟ್ ಕೇಳಿಲ್ಲ. ಕೊರಟಗೆರೆ ಕ್ಷೇತ್ರದಲ್ಲಿ ಮಾತ್ರ ನಾನು ಸ್ಪರ್ಧೆ ಮಾಡುತ್ತೇನೆ. ಎರಡು ಕ್ಷೇತ್ರದ ವಿಚಾರ ಯಾಕೆ ಬಂತು ಎಂಬುದೂ ನನಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

