BIG NEWS: 2 ಹಂತದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್; ಸಿಎಂ ಬೊಮ್ಮಾಯಿ ಮಾಹಿತಿ

ನವದೆಹಲಿ: ಕೆಲವೇ ಕ್ಷಣಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ವರಿಷ್ಠರ ಸಭೆಯಲ್ಲಿ ಅಭ್ಯರ್ಥಿಗಳ ಬಗ್ಗೆ ತೀರ್ಮಾನ ಮಾಡಲಾಗಿದೆ. ಹಲವಾರು ಸುತ್ತಿನ ಸಭೆ ಬಳಿಕ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಮಾತುಕತೆ ಬಳಿಕ ಅತಿ ಶೀಘ್ರದಲ್ಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದರು.

ಎರಡು ಹಂತಗಳಲ್ಲಿ ಬಿಜೆಪಿ ಪಟ್ಟಿ ಬಿಡುಗಡೆಯಾಗಲಿದೆ. ಮೊದಲ ಪಟ್ಟಿಯಲ್ಲಿ ದೊಡ್ಡ ಪಟ್ಟಿ ಇರಲಿದೆ. ಯಾವುದೇ ಕ್ಷಣದಲ್ಲಿಯಾದರೂ ಪಟ್ಟಿ ಬಿಡುಗಡೆಯಾಗಬಹುದು. ಬಿಜೆಪಿ ಎಲ್ಲದರಲ್ಲೂ ಹೊಸತನವನ್ನು ತರುತ್ತಿದೆ. ಈಗಾಗಲೇ ಕೆಲವರು ನಿವೃತ್ತಿ ಘೋಷಿಸಿದ್ದಾರೆ. ಆ ಕ್ಷೇತ್ರದಲ್ಲಿ ಕೆಲ ಬದಲಾವಣೆಯಾಗಲಿದೆ ಎಂದು ಹೇಳುವ ಮೂಲಕ ಹೊಸ ಮುಖಗಳಿಗೆ ಟಿಕೆಟ್ ನೀಡುವುದಾಗಿ ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read