HomeKarnatakaBIG NEWS: 2023ರ ವಿಧಾನಸಭಾ ಚುನಾವಣೆ; ಕೋಲಾರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ ಸಿದ್ದರಾಮಯ್ಯ

BIG NEWS: 2023ರ ವಿಧಾನಸಭಾ ಚುನಾವಣೆ; ಕೋಲಾರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ ಸಿದ್ದರಾಮಯ್ಯ

ಕೋಲಾರ: 2023ರ ವಿಧಾನಸಭಾ ಚುನಾವಣೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ.

ಇಂದು ಕೋಲಾರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಘೋಷಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಮೂಲಕ ಸಿದ್ದರಾಮಯ್ಯ ಸ್ಪರ್ಧೆ ಕ್ಷೇತ್ರದ ಬಗ್ಗೆ ಇದ್ದ ಎಲ್ಲಾ ಗೊಂದಲ, ಊಹಾಪೋಹಗಳಿಗೆ ಖುದ್ದು ತೆರೆ ಎಳೆದಿದ್ದಾರೆ.

ನಿಮ್ಮ ಪ್ರೀತಿ, ಅಭಿಮಾನವನ್ನು ತಿರಸ್ಕಾರ ಮಾಡಲು ಸಾಧ್ಯವಿಲ್ಲ. ಮುಂಬರುವ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸುತ್ತೇನೆ ಎಂದು ಹೇಳಿದರು.

ಎಲ್ಲಾ ನಾಯಕರೂ ಕೋಲಾರದಿಂದಲೇ ಸ್ಪರ್ಧಿಸುವಂತೆ ಹೇಳುತ್ತಿದ್ದಾರೆ. ಎಲ್ಲರೂ ಒಕ್ಕೋರಲಿನಿಂದ ಒತ್ತಾಯಿಸುತ್ತಿದ್ದೀರಿ. ನಿಮ್ಮ ಪ್ರೀತಿ, ಅಭಿಮಾನ ತಿರಸ್ಕರಿಸಲು ಸಾಧ್ಯವಿಲ್ಲ. ಹಾಗಾಗಿ ಕೋಲಾರದಿಂದ ಸ್ಪರ್ಧೆಗೆ ತೀರ್ಮಾನಿಸಿದ್ದೇನೆ. ಕ್ಷೇತ್ರದ ಸಮಸ್ಯೆ ಬಗೆಹರಿಸಲು ನನ್ನ ಶಕ್ತಿ ಮೀರಿ ಪ್ರಯತ್ನಿಸುತ್ತೇನೆ. ಅಭಿವೃದ್ಧಿ ವಿಚಾರದಲ್ಲಿ ಯಾವತ್ತೂ ಹಿಂದೆ ಉಳಿದಿಲ್ಲ. ಇಡೀ ರಾಜ್ಯದ ಜನತೆ ಸಮಸ್ಯೆಗೆ ಸ್ಪಂದಿಸಿದ್ದೇನೆ. ಇನ್ಮುಂದೆಯೂ ಸ್ಪಂದಿಸುತ್ತೇನೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular