HomeLatest NewsBIG NEWS : 2025-26 ನೇ ಸಾಲಿನ 'ಪ್ಯಾರಾ ಮೆಡಿಕಲ್' ಕೋರ್ಸಿಗೆ ಅರ್ಜಿ ಆಹ್ವಾನ, ವಿದ್ಯಾರ್ಥಿಗಳಿಗೆ...

BIG NEWS : 2025-26 ನೇ ಸಾಲಿನ ‘ಪ್ಯಾರಾ ಮೆಡಿಕಲ್’ ಕೋರ್ಸಿಗೆ ಅರ್ಜಿ ಆಹ್ವಾನ, ವಿದ್ಯಾರ್ಥಿಗಳಿಗೆ ಇಲ್ಲಿದೆ ಮಾಹಿತಿ

2025-26 ನೇ ಶೈಕ್ಷಣಿಕ ಸಾಲಿನ ಈ ಕೆಳಕಂಡ ಅರೆ ವೈದ್ಯಕೀಯ ಡಿಪ್ಲೋಮ ಕೋರ್ಸ್ಗಿಳಿಗೆ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಇತರೆ ಸರ್ಕಾರಿ ಆಸ್ಪತ್ರೆಗಳು ಹಾಗೂ ರಾಜ್ಯದಲ್ಲಿನ ವಿವಿಧ ಖಾಸಗಿ ಪ್ಯಾರಾ ಮೆಡಿಕಲ್ ಸಂಸ್ಥೆಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿದಾರರು 1 ರಿಂದ 10ನೇ ತರಗತಿ ಅಥವಾ ಪಿಯುಸಿಯವರೆಗೆ ಕನಿಷ್ಠ 07 ವರ್ಷಗಳು ಕರ್ನಾಟಕದಲ್ಲಿ ವಿದ್ಯಾಭ್ಯಾಸ ಮಾಡಿರಬೇಕು. ಇದಕ್ಕೆ ಸಂಬಂಧಿಸಿದ ದೃಢೀಕರಣ ಪ್ರತಿಯನ್ನು ಅರ್ಜಿಯೊಂದಿಗೆ ಸಲ್ಲಿಸುವುದು.
ಕೋರ್ಸಿನ ಅವಧಿ: ಪಿಯುಸಿ ಅಭ್ಯರ್ಥಿಗಳಿಗೆ 2 ವರ್ಷಗಳು + 3 ತಿಂಗಳು ಇಂಟರ್ನ್ಶಿಪ್ ಮತ್ತು ಎಸ್.ಎಸ್.ಎಲ್.ಸಿ ಅಭ್ಯರ್ಥಿಗಳಿಗೆ 3 ವರ್ಷಗಳು + 3 ತಿಂಗಳ ಇಂಟರ್ನ್ಶಿಪ್.

ವಯೋಮಿತಿ : ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳು, ಪ.ಜಾ/ಪ.ಪಂ ಹಾಗೂ ಸೇವಾನಿರತ ಅಭ್ಯರ್ಥಿಗಳಿಗೆ 40 ವರ್ಷಗಳು ಮೀರಿರಬಾರದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿ ನಮೂನೆಗಳು: ಮಂಡಳಿಯ ಜಾಲತಾಣದಲ್ಲಿ ಲಭ್ಯವಿದ್ದು ಎಲ್ಲಾ ವಿದ್ಯಾರ್ಥಿಗಳು ಆನ್-ಲೈನ್ ಮೂಲಕ ಅರ್ಜಿಯನ್ನು ತುಂಬಬೇಕಾಗಿರುತ್ತದೆ. ಅರ್ಜಿಯ ಜೊತೆ ವ್ಯಾಸಂಗ ಪ್ರಮಾಣ ಪತ್ರ ಮತ್ತು ಇತರೆ ದಾಖಲೆಗಳ ದೃಡೀಕೃತ ಪ್ರತಿಗಳನ್ನು ಕಡ್ಡಾಯವಾಗಿ ಅಪ್ ಲೋಡ್ ಮಾಡಬೇಕು.

ಅರ್ಜಿ ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.400/- ಪರಿಶಿಷ್ಟ ಜಾತಿ/ಪಂಗಡ/ಪ್ರವರ್ಗ-1 ರ ಅಭ್ಯರ್ಥಿಗಳಿಗೆ ರೂ.250/- ಅರ್ಜಿ ಶುಲ್ಕವನ್ನು ಕಡ್ಡಾಯವಾಗಿ ಆನ್ಲೈನ್ ಮುಖಾಂತರವೇ ಡೆಬಿಟ್/ಕ್ರೆಡಿಟ್ ಕಾರ್ಡ್/ನೆಟ್ ಬ್ಯಾಂಕಿಂಗ್ ಮೂಲಕ ಮಾತ್ರ ಪಾವತಿಸುವುದು. 26.06.2025 0 25.07.2025 ಜಾಲತಾಣದಲ್ಲಿ ಲಭ್ಯವಿರುತ್ತದೆ.

25.07.2025 ರ ನಂತರ ಯೂವುದೇ ಕಾರಣಕ್ಕೂ ಆಫ್-ಲೈನ್ ಮೂಲಕ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಅಭ್ಯರ್ಥಿಗಳ ಆಯ್ಕೆ: ಅಭ್ಯರ್ಥಿಗಳನ್ನು ಅವರ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳ ಮತ್ತು ಪ್ರವರ್ಗಗಳ
ಆಧಾರದ ಮೇರೆಗೆ ಆಯ್ಕೆ ಮಾಡಲಾಗುವುದು, ಕೌನ್ಸಿಲಿಂಗ್ ನಡೆಯುವ ದಿನಾಂಕದ ಬಗ್ಗೆ ಅಭ್ಯರ್ಥಿಗಳಿಗೆ ಅರ್ಜಿಯಲ್ಲಿ ನಮೂದಿಸಿದ ಮೊಬೈಲ್ ಸಂಖ್ಯೆಗೆ ಸೂಚನಾ ಸಂದೇಶವನ್ನು ಕಳುಹಿಸಲಾಗುವುದು. ಕೌನ್ಸಿಲಿಂಗ್ಗೆ ಹಾಜರಾಗುವ ಸಮಯದಲ್ಲಿ ಎಲ್ಲಾ ದಾಖಲೆಗಳ ಮೂಲ ಪ್ರಮಾಣಪತ್ರಗಳನ್ನು ಸಲ್ಲಿಸುವುದು. ತಪ್ಪಿದಲ್ಲಿ ಕೌನ್ಸಿಲಿಂಗ್ಗೆ ಅವಕಾಶ ನೀಡಲಾಗುವುದಿಲ್ಲ. ಆನ್ಲೈನ್ ಮೂಲಕ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಸಲಾಗುವುದು. ವಿದ್ಯಾರ್ಥಿಗಳ ಮೂಲ ದಾಖಲಾತಿಗಳನ್ನು ಆನ್ಲೈನ್ ಮೂಲಕ ಪರಿಶೀಲಿಸಿದ ನಂತರ ವಿದ್ಯಾರ್ಥಿಗಳು ಇಚ್ಚಿಸುವ ಕೋರ್ಸ್ ಮತ್ತು ಕಾಲೇಜುಗಳ ಆಯ್ಕೆಯನ್ನು ಆನ್ಲೈನ್ನಲ್ಲಿ ನಮೂದಿಸಲು ಅವಕಾಶ ನೀಡಲಾಗುವುದು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular