HomeKarnatakaBIG NEWS: 24 ಗಂಟೆಯಲ್ಲಿ ಅಪ್ಪಳಿಸಲಿದೆ ಚಂಡಮಾರುತ; ಹವಾಮಾನ ಇಲಾಖೆ ಎಚ್ಚರಿಕೆ

BIG NEWS: 24 ಗಂಟೆಯಲ್ಲಿ ಅಪ್ಪಳಿಸಲಿದೆ ಚಂಡಮಾರುತ; ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವುಂಟಾಗಿದ್ದು, ಮುಂದಿನ 24 ಗಂಟೆಯಲ್ಲಿ ರಾಜ್ಯಕ್ಕೆ ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬಿಪೋರ್ ಜಾಯ್ ಚಂಡಮಾರುತ ಅಪ್ಪಳಿಸಲಿದ್ದು, ರಾಜ್ಯದ ಕರಾವಳಿ ಭಾಗದಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಮೀನುಗಾರರು, ಪ್ರವಾಸಿಗರು ಹಾಗೂ ಸಾರ್ವಜನಿಕರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಚಂಡಮಾರುತದಿಂದಾಗಿ ಈ ಬಾರಿ ಮುಂಗಾರು ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಈಗಾಗಲೇ ಆರಂಭವಾಗಬೇಕಿದ್ದ ಮುಂಗಾರು 4 ದಿನ ತಡವಾಗಿ ಕೇರಳಕ್ಕೆ ಎಂಟ್ರಿಯಾಗುವ ಸಾಧ್ಯತೆ ಇದ್ದು, ರಾಜ್ಯಕ್ಕೆ ಮುಂಗಾರು ಪ್ರವೇಶ ತಡವಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular