BIG NEWS : ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿದ್ದ 24 ಮಂದಿ ಪಾಕ್, 159 ಮಂದಿ ಬಾಂಗ್ಲಾ ಪ್ರಜೆಗಳು ವಶಕ್ಕೆ : ಗೃಹ ಸಚಿವ ಪರಮೇಶ್ವರ್

ಬೆಳಗಾವಿ : ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿದ್ದ 24 ಮಂದಿ ಪಾಕ್ ಹಾಗೂ 159 ಮಂದಿ ಬಾಂಗ್ಲಾ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಪರಮೇಶ‍್ವರ್ ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಪಾಕ್ ನ 24 ಮತ್ತು 159 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ. 115 ಜನ ಬಾಂಗ್ಲಾದೇಶಿಗರು ನಕಲಿ ದಾಖಲೆಗಳ ಮೂಲಕ ವಾಸವಿರುವುದು ಕಂಡು ಬಂದಿದೆ.ಅಕ್ರಮವಾಗಿ ಬರೋದು ಇದೇನು ಹೊಸದಲ್ಲ. ಗಡಿಯಲ್ಲಿ ಸೈನಿಕರು ಅಂತಹವರನ್ನ ತಡೆಗಟ್ಟುವ ಕೆಲಸ ಮಾಡುತ್ತಿದ್ದಾರೆ. ಅನಧಿಕೃತವಾಗಿ ಬಂದಿರುವ ವಿದೇಶಿ ಪ್ರಜೆಗಳನ್ನು ಪೊಲೀಸರು  ಪತ್ತೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read