BIG NEWS: 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ

ಹುಬ್ಬಳ್ಳಿ: ಹುಬ್ಬಳಿಯಲ್ಲಿ ನಡೆಯುತ್ತಿರುವ 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ ಆಯೋಜಿಸಿರುವ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದರು. ಈ ವೇಳೆ ಪ್ರಧಾನಿ ಮೋದಿಯವರಿಗೆ ಏಲಕ್ಕಿ ಹಾರ ಹಾಕಿ ಸನ್ಮಾನಿಸಲಾಯಿತು. ಅಲ್ಲದೇ ಬಿದರಿಕಲೆಯಲ್ಲಿ ಅರಳಿದ ಸ್ವಾಮಿ ವಿವೇಕಾನಂದರ ಮೂರ್ತಿ, ಗರಗ ಬೆಂಗೇರಿಯಲ್ಲಿ ತಯಾರಿಸಿದ ರಾಷ್ಟ್ರಧ್ವಜವನ್ನು ಉಡುಗೊರೆಯಾಗಿ ನೀಡಲಾಯಿತು.

ಇದೇ ವೇಳೆ ಕರ್ನಾಟಕ, ತಮಿಳುನಡು, ಪುದುಚೆರಿ, ಕೇರಳ, ಒಡಿಶಾ ಸೇರಿದಂತೆ ವಿವಿಧ ರಾಜ್ಯಗಳ ಯುವತಂಡದಿಂದ ಪಥಸಂಚಲನ, ಗ್ಲೋಬಲ್ ಶಾಲಾ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ, ವಿದ್ಯಾರ್ಥಿಗಳಿಂದ ಮಲ್ಲಕಂಬ ಪ್ರದರ್ಶನ, ನೃತ್ಯ ಪ್ರದರ್ಶನಗಳನ್ನು ಪ್ರಧಾನಿ ಮೋದಿ ವೀಕ್ಷಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read