HomeLatest NewsBIG NEWS: ರಾಜ್ಯದಲ್ಲಿ 37 ಲಕ್ಷ ಅಧಿಕೃತ, ಲಕ್ಷಾಂತರ ಅನಧಿಕೃತ ಬೋರ್ ವೆಲ್: ರಾಷ್ಟ್ರೀಯ ಸರಾಸರಿಗಿಂತ...

BIG NEWS: ರಾಜ್ಯದಲ್ಲಿ 37 ಲಕ್ಷ ಅಧಿಕೃತ, ಲಕ್ಷಾಂತರ ಅನಧಿಕೃತ ಬೋರ್ ವೆಲ್: ರಾಷ್ಟ್ರೀಯ ಸರಾಸರಿಗಿಂತ ಶೇ. 8ರಷ್ಟು ಹೆಚ್ಚಿನ ಬಳಕೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಕೆರೆಗಳಿಗೆ ನೀರು ತುಂಬಿಸುವುದರಲ್ಲಿ ಏಷ್ಯಾದಲ್ಲೇ ಉತ್ತಮ‌ ಕಾರ್ಯ ನಮ್ಮ ರಾಜ್ಯದಲ್ಲಿ ಆಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

  ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ “ನೀರಿದ್ದರೆ ನಾಳೆ” ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಅವರು, ನಾಗರಿಕತೆ ಬೆಳೆದದ್ದು – ಉಳಿದಿರುವುದು ನೀರಿನಿಂದಲೇ. ಜನರಲ್ಲಿ ನೀರಿನ ಬಳಕೆ, ನೀರಿನ ಮೌಲ್ಯ ಮತ್ತು ಅಂತರ್ಜಲ ವೃದ್ಧಿ ಬಗ್ಗೆ ಸಚಿವ ಬೋಸರಾಜು ಅವರು ಇಲಾಖೆಯ ವತಿಯಿಂದ ಉತ್ತಮ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ. ಇದು ಆರೋಗ್ಯಕರ ಸಂಗತಿ ಎಂದರು.

ರಾಜ್ಯದಲ್ಲಿ 37 ಲಕ್ಷ ಬೋರ್ ವೆಲ್ ಗಳ ಮೂಲಕ ಅಂತರ್ಜಲ ಬಳಕೆ ಆಗುತ್ತಿದೆ. ದಾಖಲೆಗಳಲ್ಲಿ ಇಲ್ಲದ ಲಕ್ಷಾಂತರ ಅನಧಿಕೃತ ಬೋರ್ ವೆಲ್ ಗಳೂ ಇವೆ. ರಾಷ್ಟ್ರೀಯ ಸರಾಸರಿಗಿಂತ ಶೇ.8 ರಷ್ಟು ಹೆಚ್ಚಿನ‌ ಬಳಕೆ ಆಗುತ್ತಿದೆ ಎನ್ನುವ ವರದಿಗಳಿವೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

144 ತಾಲ್ಲೂಕುಗಳನ್ನು ಹೊರತುಪಡಿಸಿ ಉಳಿದ ತಾಲ್ಲೂಕುಗಳಲ್ಲಿ ನೀರಿನ ಅಂತರ್ಜಲದ ಪ್ರಮಾಣ ಕೊರತೆ ಇದೆ. ಈ ಕಾರಣಕ್ಕೇ ಕೋಲಾರ ಮತ್ತು ಚಿಕ್ಕಬಳ್ಳಾಪುರದ ಕೆರೆಗಳನ್ನು ತುಂಬಿಸುವ ಕೆ.ಸಿ.ವ್ಯಾಲ್ಯೂ ಯೋಜನೆ ಜಾರಿ ಮಾಡಲಾಯಿತು. ಇದರಿಂದ ಈಗ ಅಂತರ್ಜಲ ವೃದ್ಧಿಯಾಗಿದೆ. ಆದರೆ ಇದನ್ನೂ ವಿರೋಧಿಸುವವರು ಇದ್ದಾರೆ ಎಂದರು. 

ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಅಂತರ್ಜಲ ವೃದ್ಧಿಗೆ ಸಾವಿರಾರು ಕೋಟಿ ಖರ್ಚು ಮಾಡಿದ್ದೇವೆ. ಇದರಿಂದ ಅಂತರ್ಜಲ ಉತ್ತಮವಾಗಿ ವೃದ್ಧಿಯಾಗಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular