
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಸರ್ವೆ ಆಧಾರದ ಮೇಲೆ ಬಿಜೆಪಿ ಟಿಕೆಟ್ ನೀಡಲಾಗುತ್ತದೆ. ಯಡಿಯೂರಪ್ಪನವರು ಅವರ ಅನುಭವದ ಆಧಾರದಲ್ಲಿ ಹೇಳಿದ್ದಾರೆ. ಅವರ ಮಾತನ್ನು ಅಲ್ಲಗಳೆಯಲು ಆಗಲ್ಲ ಎಂದರು.
ಇದೇ ವೇಳೆ ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆ ಬಗ್ಗೆ ಅವರು ಇಂದು ಪ್ರಕಟಿಸಲಿದ್ದಾರೆ. ಈಗಾಗಲೇ ಅವರು ಹೈಕಮಾಂಡ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿಸಿದರು.
ಇನ್ನು ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಬಿಜೆಪಿ ಸೇರ್ಪಡೆ ವಿಚಾರವಾಗಿ, ಜನಾರ್ಧನ ರೆಡ್ಡಿ ಸಧ್ಯ ಯಾವುದೇ ತೀರ್ಮಾನ ಪ್ರಕಟಿಸಿಲ್ಲ. ಅವರು ಸೂಕ್ತ ನಿರ್ಧಾರ ತೆಗೆದುಕೊಳ್ಳಲಿ, ಆಮೇಲೆ ನೋಡೋಣ ಎಂದು ಹೇಳಿದರು.

