BIG NEWS: 40% ಕಮಿಷನ್ ಆರೋಪ ದಾಖಲೆ ಸಮೇತ ತೋರಿಸಲಿ; ಕಾಂಗ್ರೆಸ್ ನಾಯಕರಿಗೆ ಮಾಜಿ ಸಿಎಂ ಬೊಮ್ಮಾಯಿ ಸವಾಲು

ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಮಾಡಿರುವ 40% ಕಮಿಷನ್ ಆರೋಪವನ್ನು ದಾಖಲೆ ಸಮೇತ ತೋರಿಸಲಿ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸವಾಲು ಹಾಕಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ್ ಬೊಮ್ಮಾಯಿ, ಬಿಜೆಪಿ ಸರ್ಕರದ ಅವಧಿಯಲ್ಲಿನ ಹಗರಣಗಳ ತನಿಖೆ ಮಾಡುವುದಾಗಿ ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ದಯವಿಟ್ಟು ತನಿಖೆ ಮಾಡಲಿ. ಹಾಗೆಯೇ 40% ಕಮಿಷನ್ ಆರೋಪ ಮಾಡಿರುವ ಅವರು ಅದರ ಬಗ್ಗೆ ಪುರಾವೆಗಳನ್ನು ತೋರಿಸಲಿ ಎಂದು ಹೇಳಿದರು.

ಗುತ್ತಿಗೆದಾರರ ಸಂಘದವರೂ 40% ಕಮೀಷನ್ ಆರೋಪ ಮಾಡಿದ್ದರು. ಈಗ ಅವರ ಸರ್ಕಾರ ಬಂದಿದೆ. ಗುತ್ತಿಗೆದಾರರು ಸಂಘದ ಅಧ್ಯಕ್ಷ ಕೆಂಪಣ್ಣ ಮೇಲೆ ಬಹಳ ದೊಡ್ಡ ಜವಾಬ್ದಾರಿ ಇದೆ. ಇನ್ಮೇಲೆ ಕೆಂಪಣ್ಣ ತಮ್ಮೆಲ್ಲ ಸಂಘದವರಿಗೂ 40% ಕಮ್ಮಿಗೆ ಟೆಂಡರ್ ಹಾಕುವಂತೆ ಹೇಳಬೇಕು. ಗುತ್ತಿಗೆದಾರ ಸಂಘದವರು ಇನ್ನು ಮುಂದಿನ ಎಲ್ಲ ಟೆಂಡರ್‌ಗಳಲ್ಲೂ 40% ಕಡಿಮೆ ಹಾಕಲಿ. ಅಂದರೆ ಮಾತ್ರ ನಮ್ಮ ಕಾಲದಲ್ಲಿ 40% ಇತ್ತು ಅಂತ ಆಗುತ್ತದೆ. ಇವತ್ತು ಅಷ್ಟೇ ಮೊತ್ತಕ್ಕೆ ಟೆಂಡರ್ ಹಾಕಿದರೆ, 40% ಈಗಲೂ ಇದೆ ಅಂತ ಆಗುತ್ತದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read