BREAKING : 40 ಕಾಂಗ್ರೆಸ್ ಶಾಸಕರಿಂದ ರಾಜೀನಾಮೆಗೆ ಚಿಂತನೆ ; ಸಂಸದ ‘ಗೋವಿಂದ ಕಾರಜೋಳ’ ಸ್ಪೋಟಕ ಹೇಳಿಕೆ..!

ಚಿತ್ರದುರ್ಗ : 40 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಲು ಚಿಂತನೆ ನಡೆಸಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಂಸದ ಗೋವಿಂದ ಕಾರಜೋಳ ಸರ್ಕಾರದಲ್ಲಿ ಯಾವ ಅಭಿವೃದ್ದಿ ಕೆಲಸ ಆಗುತ್ತಿಲ್ಲ.ಅಭಿವೃದ್ದಿ ಕಾರ್ಯಕ್ಕೆ ಹಣ ಸಿಗುತ್ತಿಲ್ಲ ಎಂದು 40 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಲು ಚಿಂತನೆ ನಡೆಸಿದ್ದಾರೆ ಎಂದು ಹೇಳಿದರು.

ಗ್ಯಾರಂಟಿ ಆಮಿಷಗಳ ಮೂಲಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಅಧಿಕಾರಕ್ಕೆ ಬಂದಿದ್ದಾರೆ. ಗ್ಯಾರಂಟಿ ಯೋಜನೆಗೆ ಹಣ ಕೊಟ್ಟು ಸರ್ಕಾರ ದಿವಾಳಿಯಾಗುತ್ತಿದೆ. ಈಗ ಅದನ್ನು ಸರಿದೂಗಿಸಲು ಸರ್ಕಾರ ಬೆಲೆ ಏರಿಕೆ ಮಾಡಿದೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿಕೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read